ತುಮಕೂರು: ಶಿವಮೊಗ್ಗದ ಗ್ರಾಹಕ ವ್ಯಾಜ್ಯ ನ್ಯಾಯಾಲಯದ ನ್ಯಾಯಾಧೀಶರಾಗಿ ಕೆಲಸ ಮಾಡುತ್ತಿದ್ದ, ಸದಾನಂದ ಎಂ. ಕಲಾಲ್ ಅವರಿಗೆ ಅನಾರೋಗ್ಯ ಉಂಟಾದ ಹಿನ್ನೆಲೆ ಶಿವಮೊಗ್ಗದಿಂದ ಬೆಂಗಳೂರಿಗೆ ಆ್ಯಂಬುಲೆನ್ಸ್ನಲ್ಲಿ ಕರೆದುಕೊಂಡು ಹೋಗಲಾಗುತ್ತಿತ್ತು. ಮಾರ್ಗ ಮಧ್ಯೆ ನ್ಯಾಯಾಧೀಶರಿಗೆ ಕಾರ್ಡಿಯಾಕ್ ಅರೆಸ್ಟ್ ಆದ ಹಿನ್ನೆಲೆ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.
ಶಿವಮೊಗ್ಗ ಕನ್ಸ್ಯೂಮರ್ ಕೋರ್ಟ್ ಜಡ್ಜ್ಗೆ ಅನಾರೋಗ್ಯ: ಸಿದ್ಧಗಂಗಾ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ - ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ
ಶಿವಮೊಗ್ಗದ ಕನ್ಸ್ಯೂಮರ್ ಕೋರ್ಟ್ನ ನ್ಯಾಯಾಧೀಶರಿಗೆ ಅನಾರೋಗ್ಯ ಉಂಟಾದ ಹಿನ್ನೆಲೆ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.
ಶಿವಮೊಗ್ಗದ ಕನ್ಸ್ಯೂಮರ್ ಕೋರ್ಟ್ನ ನ್ಯಾಯಾಧೀಶರಿಗೆ ಅನಾರೋಗ್ಯ
ತುಮಕೂರು ಜಿಲ್ಲೆಯ ತಿಪಟೂರು, ಗುಬ್ಬಿ ಹಾಗೂ ತುಮಕೂರು ನಗರದಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿತ್ತು. ಈ ಹಿಂದೆ ಇವರು ಧಾರವಾಡದಲ್ಲಿ ನ್ಯಾಯಾಧೀಶರಾಗಿ ಕೆಲಸ ಮಾಡಿ, ನಿವೃತ್ತಿ ಹೊಂದಿದ್ದರು. ಮೊದಲೇ ಮೂತ್ರಪಿಂಡ ಟ್ರಾನ್ಸ್ಲೇಷನ್ ಚಿಕಿತ್ಸೆಗೆ ಒಳಗಾಗಿದ್ದರು. 10 ದಿನಗಳ ಹಿಂದಷ್ಟೇ ಅಪಘಾತಕ್ಕೆ ಒಳಗಾಗಿದ್ದರು ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ - 2 ಸಿನಿಮಾ ಬಿಡುಗಡೆಗೆ ತಡೆ ಕೋರಿದ್ದ ಅರ್ಜಿ ವಜಾ