ತುಮಕೂರು:ಭಾರತ-ಚೀನಾ ಗಡಿಯಲ್ಲಿ ಹುತಾತ್ಮರಾದ ಭಾರತೀಯ ಯೋಧರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿ ತುಮಕೂರು ಮಹಾನಗರ ಪಾಲಿಕೆ ಆವರಣದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ತುಮಕೂರು: ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಕೆ
ಶಾಸಕ ಜ್ಯೋತಿ ಗಣೇಶ್ ನೇತೃತ್ವದಲ್ಲಿ ಹುತಾತ್ಮ ಯೋಧರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ, ನಂತರ ದೀಪಗಳನ್ನು ಬೆಳಗಿಸಲಾಯಿತು. ಒಂದು ನಿಮಿಷ ಕಾಲ ಮೌನಾಚರಣೆ ಮಾಡುವ ಮೂಲಕ ಹುತಾತ್ಮರಾದ ಭಾರತೀಯ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
Shraddanjali for martyrdom
ಶಾಸಕ ಜ್ಯೋತಿ ಗಣೇಶ್ ನೇತೃತ್ವದಲ್ಲಿ ಹುತಾತ್ಮ ಯೋಧರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ, ನಂತರ ದೀಪಗಳನ್ನು ಬೆಳಗಿಸಲಾಯಿತು. ಒಂದು ನಿಮಿಷ ಕಾಲ ಮೌನಾಚರಣೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.
ಈಗಾಗಲೇ ಕೊರೊನಾ ಸೋಂಕು ವಿಶ್ವದಾದ್ಯಂತ ಹರಡಲು ಕಾರಣವಾಗಿರುವ ಚೀನಾ, ಅದನ್ನು ಮರೆಮಾಚಲು ವಿನಾಕಾರಣ ಗಡಿ ವಿವಾದವನ್ನು ಬೆಳಕಿಗೆ ತರಲು ಮುಂದಾಗಿದೆ. ಚೀನಾದ ಇಂತಹ ಕುತಂತ್ರಕ್ಕೆ ಭಾರತ ತಕ್ಕ ಉತ್ತರ ನೀಡಲಿದೆ ಎಂದು ಶಾಸಕ ಜ್ಯೋತಿ ಗಣೇಶ್ ತಿಳಿಸಿದರು. ಶ್ರದ್ಧಾಂಜಲಿ ವೇಳೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.