ತುಮಕೂರು :ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದ ತುಮಕೂರಿನ ಭೂಮಿ ಬಳಗದ ಅಧ್ಯಕ್ಷ ಸೋಮಶೇಖರ್ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ನಂತರ ಶ್ರೀ ಸಿದ್ದಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಕ್ವಾರಂಟೈನ್ಗೆ ಒಳಗಾಗಿದ್ದಾರೆ.
ಕ್ವಾರಂಟೈನ್ಗೆ ಒಳಗಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ - ಸಿದ್ದಗಂಗಾ ಮಠ
ತುಮಕೂರಿನ ಭೂಮಿ ಬಳಗದ ಅಧ್ಯಕ್ಷ ಸೋಮಶೇಖರ್ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ನಂತರ ಶ್ರೀ ಸಿದ್ದಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಕ್ವಾರಂಟೈನ್ಗೆ ಒಳಗಾಗಿದ್ದಾರೆ.
ಶ್ರೀ ಸಿದ್ಧಲಿಂಗ ಸ್ವಾಮೀಜಿ
ಸರ್ಕಾರದ ಮಾರ್ಗಸೂಚಿ ಅನ್ವಯ ಕ್ವಾರಂಟೈನ್ ನಲ್ಲಿ ಇರಲು ತೀರ್ಮಾನಿಸಿದ್ದೇವೆ. ಮೃತಪಟ್ಟ ಸೋಮಶೇಖರ್ ಸಿದ್ದಗಂಗಾ ಮಠದ ಜೊತೆಯ ಅವಿನಾಭಾವ ಸಂಬಂಧ ಹೊಂದಿದ್ದರು, ಹೀಗಾಗಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದೆವು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಸಮಾರಂಭ ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಭಕ್ತರು ಯಾವುದೇ ರೀತಿಯ ಗೊಂದಲಕ್ಕೆ ಒಳಗಾಗಬಾರದು ಎಂದು ಪ್ರಕಟಣೆಯಲ್ಲಿ ಶ್ರೀ ಸಿದ್ಧಲಿಂಗ ಸ್ವಾಮೀಜಿ ತಿಳಿಸಿದ್ದಾರೆ.