ತುಮಕೂರು: ಇಂದು ಸಿದ್ದಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಯ ಎರಡನೇ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಠದಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಸಿಎಂ ಯೂಡಿಯೂರಪ್ಪ ಚಾಲನೆ ನೀಡಿದರು.
ಸಿದ್ದಗಂಗಾ ಶ್ರಿಗಳ ಎರಡನೇ ವರ್ಷದ ಪುಣ್ಯ ಸ್ಮರಣೆ: ಮಠದ ಕಾರ್ಯಕ್ರಮದಲ್ಲಿ ಸಿಎಂ ಭಾಗಿ - ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಸಿಎಂ ಯಡಿಯೂರಪ್ಪ
ಇಂದು ನಡೆದಾಡುವ ದೇವರು, ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಗಳ ಎರಡನೇ ವರ್ಷದ ಪುಣ್ಯಸ್ಮರಣೆ, ಈ ಹಿನ್ನೆಲೆಯಲ್ಲಿ ಸಿದ್ದಗಂಗಾ ಮಠದಲ್ಲಿ ಸ್ಮರಣೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇದಕ್ಕೆ ಸಿಎಂ ಯಡಿಯೂರಪ್ಪ ಚಾಲನೆ ನೀಡಿ, ಭಾಗಿಯಾಗಿದ್ದರು.
ನಡೆದಾಡುವ ದೇವರು ಎಂದೇ ಖ್ಯಾತಿ ಹೊಂದಿದ್ದ ಶಿವಕುಮಾರ ಸ್ವಾಮೀಜಿಗಳು ನಮ್ಮನ್ನೆಲ್ಲ ಅಗಲಿ ಇಂದಿಗೆ ಎರಡು ವರ್ಷ ಕಳೆದಿವೆ. ಶ್ರೀಗಳ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಮಠದಲ್ಲಿ ಶ್ರಿಗಳಿಗೆ ನಮನ ನಲ್ಲಿಸುವ ಸಲುವಾಗಿ ಸ್ಮರಣೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಸಿಎಂ ಉದ್ಘಾಟಿಸಿದರು.
ಸಿದ್ದಗಂಗಾ ಮಠದಲ್ಲಿರುವ ಶಿವಕುಮಾರ ಶ್ರೀಗಳ ಗದ್ದುಗೆಯನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿದ್ದು, ಮಠದಲ್ಲಿ ಭಕ್ತಿ ಪೂರ್ವಕ ವಾತಾವರಣ ನಿರ್ಮಾಣವಾಗಿದೆ. ಕಾರ್ಯಕ್ರಮದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ, ಶ್ರೀ ಸಿದ್ದಲಿಂಗ ಸ್ವಾಮೀಜಿ, ಉಪಮುಖ್ಯಮಂತ್ರಿ ಡಾಕ್ಟರ್ ಅಶ್ವತ್ಥನಾರಾಯಣ, ವಚನಾನಂದ ಸ್ವಾಮೀಜಿ ಸೇರಿದಂತೆ ವಿವಿಧ ಕ್ಷೇತ್ರದ ಮಠಾಧೀಶರು ಹಾಗೂ ಸ್ಥಳೀಯ ಮುಖಂಡರು ಹಾಜರಿದ್ದರು.