ತುಮಕೂರು:ಇಂದು ಮಧುಗಿರಿ ತಾಲೂಕು ಕ್ರೀಡಾಂಗಣದಲ್ಲಿ 300ಕ್ಕೂ ಹೆಚ್ಚು ನೂತನ ಚುನಾಯಿತ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರನ್ನು ಸನ್ಮಾನಿಸಲಾಯಿತು.
ಓದಿ: ಹನಿಟ್ರ್ಯಾಪ್ ಪ್ರಕರಣ ಕಡಿವಾಣಕ್ಕೆ ಕಾನೂನು ಬೇಕಿದೆ; ಶಾಸಕ ಕುಮಟಳ್ಳಿ
ತುಮಕೂರು:ಇಂದು ಮಧುಗಿರಿ ತಾಲೂಕು ಕ್ರೀಡಾಂಗಣದಲ್ಲಿ 300ಕ್ಕೂ ಹೆಚ್ಚು ನೂತನ ಚುನಾಯಿತ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರನ್ನು ಸನ್ಮಾನಿಸಲಾಯಿತು.
ಓದಿ: ಹನಿಟ್ರ್ಯಾಪ್ ಪ್ರಕರಣ ಕಡಿವಾಣಕ್ಕೆ ಕಾನೂನು ಬೇಕಿದೆ; ಶಾಸಕ ಕುಮಟಳ್ಳಿ
ಕಾರ್ಯಕ್ರಮವನ್ನು ಮಧುಗಿರಿ ಮಾಜಿ ಶಾಸಕ ಕೆ.ಎನ್. ರಾಜಣ್ಣ ಆಯೋಜನೆ ಮಾಡಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಸಮಾರಂಭದಲ್ಲಿ ಕಾಂಗ್ರೆಸ್ ಬೆಂಬಲಿತ ನೂತನ ಗ್ರಾಮ ಪಂಚಾಯಿತಿ ಸದಸ್ಯರನ್ನು ಮೈಸೂರು ಪೇಟ ತೊಡಿಸಿ ಶಾಲು ಹೊದಿಸಿ ಸನ್ಮಾನಿಸಿದ್ದು ವಿಶಿಷ್ಟವಾಗಿ ಕಂಡುಬಂದಿತು.
ನೂತನ ಗ್ರಾಮ ಪಂಚಾಯಿತಿ ಅಭಿನಂದನಾ ಸಮಾರಂಭದಲ್ಲಿ ವೇದಿಕೆಯ ಎರಡೂ ಬದಿಯಲ್ಲಿ ಚುನಾಯಿತ ಗ್ರಾಮ ಪಂಚಾಯತ್ ಸದಸ್ಯರಿಗೆ ಮೈಸೂರು ಪೇಟ ತೋಡಿಸಿದ್ದು ಅವರ ಸಂಭ್ರಮಕ್ಕೆ ಪಾರವೇ ಇರಲಿಲ್ಲ. ಅಲ್ಲದೆ ಕೆಲ ಗ್ರಾಮ ಪಂಚಾಯಿತಿ ಸದಸ್ಯರಂತೂ ತಮ್ಮ ಮದುವೆಯ ಕ್ಷಣದ ನೆನಪುಗಳನ್ನು ಮೆಲುಕು ಹಾಕಿಕೊಂಡದ್ದು ವಿಶೇಷವಾಗಿತ್ತು.
ಅಲ್ಲದೆ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಸೋಲು ಅನುಭವಿಸಿದ ಕಾಂಗ್ರೆಸ್ ಬೆಂಬಲಿತ ಸದಸ್ಯರನ್ನು ಸಹ ಇದೇ ವೇಳೆ ಸನ್ಮಾನಿಸಲಾಯಿತು. ಇನ್ನು ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ವೇದಿಕೆಯ ಎರಡು ಬದಿಯಲ್ಲಿ ಸ್ವತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರಳಿ ಮೈಸೂರು ಪೇಟ ತೊಡಿಸಿ ಸನ್ಮಾನಿಸಿದರು.