ಬೆಂಗಳೂರು:ನಡೆದಾಡುವ ದೇವರು, ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತಿಯಂದು ರಾಜ್ಯ ಸರ್ಕಾರ ಹೊಸ ನಿರ್ಧಾರ ಪ್ರಕಟಿಸಿದೆ. ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಸಿದ್ಧಗಂಗಾ ಶ್ರೀಗಳ ಹೆಸರಿಡುವ ಬಗ್ಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ರಾಜ್ಯ ಸರ್ಕಾರದ ಬಿಸಿಯೂಟ ಯೋಜನೆಗೆ ಡಾ.ಶಿವಕುಮಾರ ಸ್ವಾಮೀಜಿ ಹೆಸರು ಘೋಷಣೆ - ಸಿದ್ಧಗಂಗಾ ಶ್ರೀ ಶಿವಕುಮಾರ ಸ್ವಾಮಿ
ರಾಜ್ಯ ಸರ್ಕಾರದ ಬಿಸಿಯೂಟ ಯೋಜನೆಗೆ ಸಿದ್ಧಗಂಗಾ ಶ್ರೀಗಳ ಹೆಸರಿಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ರಾಜ್ಯ ಸರ್ಕಾರದ ಬಿಸಿಯೂಟ ಯೋಜನೆಗೆ ಡಾ.ಶಿವಕುಮಾರಸ್ವಾಮಿಗಳ ಹೆಸರು: ನಳಿನ್ ಕುಮಾರ್ ಕಟೀಲ್ ಟ್ವೀಟ್
ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತಿ ಅಂಗವಾಗಿ ಟ್ವೀಟ್ ಮಾಡಿರುವ ನಳಿನ್ ಕುಮಾರ್, ರಾಜ್ಯ ಸರ್ಕಾರದ ಬಿಸಿಯೂಟ ಯೋಜನೆಗೆ ಪೂಜ್ಯ ಸಿದ್ಧಗಂಗಾ ಶ್ರೀಗಳ ಹೆಸರಿಡಲು ಸಿಎಂ ಬಸವರಾಜ ಬೊಮ್ಮಾಯಿ ನಿರ್ಧರಿಸಿದ್ದು, ಈ ನಿರ್ಧಾರವನ್ನು ಭಾರತೀಯ ಜನತಾ ಪಾರ್ಟಿ ಸ್ವಾಗತಿಸುತ್ತದೆ. ಇದು ಬಹಳ ಉತ್ತಮ ನಿರ್ಧಾರ ಎಂದು ತಿಳಿಸಿದ್ದಾರೆ.