ತುಮಕೂರು:ಒಬ್ಬ ಭ್ರಷ್ಟ ಮುಖ್ಯಮಂತ್ರಿ ಬದಲಾಗಿ ಮತ್ತೊಬ್ಬ ಭ್ರಷ್ಟ ಮುಖ್ಯಮಂತ್ರಿ ಬರಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ ಬದಲಾವಣೆ ಕುರಿತು ಪ್ರತಿಕ್ರಿಯಿಸಿದ್ದಾರೆ. ತುಮಕೂರಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ವಿಭಾಗೀಯ ಮಟ್ಟದ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಅವರು ಮಾತನಾಡಿದ್ದಾರೆ.
ಒಬ್ಬ ಭ್ರಷ್ಟ ಮುಖ್ಯಮಂತ್ರಿ ಬದಲಾಗಿ ಇನ್ನೊಬ್ಬ ಭ್ರಷ್ಟ ಸಿಎಂ ಬರಲಿದ್ದಾರೆ: ಸಿದ್ದರಾಮಯ್ಯ - ಯಡಿಯೂರಪ್ಪ
ತುಮಕೂರು ಪ್ರವಾಸದಲ್ಲಿರುವ ರಾಜ್ಯ ಕಾಂಗ್ರೆಸ್ ನಾಯಕರು ಬಿಜೆಪಿಯಲ್ಲಿನ ಸಿಎಂ ಬದಲಾವಣೆ ವದಂತಿ ಸಂಬಂಧ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಒಬ್ಬ ಭ್ರಷ್ಟ ಮುಖ್ಯಮಂತ್ರಿ ಬದಲಾದರೆ ಇನ್ನೊಬ್ಬ ಭಷ್ಟ ಮುಖ್ಯಮಂತ್ರಿ ಬರಲಿದ್ದಾರೆ ಎಂದಿದ್ದಾರೆ.
ಸಿದ್ದರಾಮಯ್ಯ
ಉತ್ತರ ಕರ್ನಾಟಕದಲ್ಲಿ ನೆರೆ ನಡುವೆಯೂ ಅಧಿಕಾರಕ್ಕಾಗಿ ಬಿಜೆಪಿ ಮುಖಂಡರು ಕಿತ್ತಾಡುತ್ತಿದ್ದಾರೆ ಎಂದರು. ಅವರು ನೆರೆಯ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಅವರಿಗೆ ಅಧಿಕಾರ ಮುಖ್ಯ ಎಂದರು.
ಇದನ್ನೂ ಓದಿ:ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅವರೇ ಮುಂದುವರಿಯುತ್ತಾರೆ: ಡಿಸಿಎಂ ಕಾರಜೋಳ್