ತುಮಕೂರು: ಎಸಿ ರೂಂಗಳಲ್ಲಿ ಕುಳಿತು ಸರ್ಕಾರದ ಆದೇಶಗಳನ್ನು ಅನುಷ್ಠಾನಕ್ಕೆ ತರುವ ದೊಡ್ಡ ಅಧಿಕಾರಿಗಳನ್ನು ಕೊರೊನಾ ವಾರಿಯರ್ಸ್ ಎಂದು ಒಪ್ಪಲು ಸಾಧ್ಯವಿಲ್ಲ ಎಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕ ಡಿ.ಸಿ.ಗೌರಿಶಂಕರ್ ಅಭಿಪ್ರಾಯಪಟ್ಟಿದ್ದಾರೆ.
ಎಸಿ ರೂಂಗಳಲ್ಲಿ ಕುಳಿತಿರೋ ಅಧಿಕಾರಿಗಳು ಕೊರೊನಾ ವಾರಿಯರ್ಸ್ ಅಲ್ಲ: ಶಾಸಕ ಗೌರಿಶಂಕರ್ - ಎಸಿ ರೂಂಗಳಲ್ಲಿ ಕುಳಿತಿರೋ ಅಧಿಕಾರಿಗಳು ಕೊರೊನಾ ವಾರಿಯರ್ಸ್ಗಳಲ್ಲ
ಎಸಿ ರೂಂಗಳಲ್ಲಿ ಕುಳಿತಿರೋ ಅಧಿಕಾರಿಗಳು ಕೊರೊನಾ ವಾರಿಯರ್ಸ್ ಅಲ್ಲ. ಬದಲಾಗಿ ಮನೆ ಮನೆಗೂ ಹೋಗಿ ಆರೋಗ್ಯ, ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ ಎಂದು ಜಾಗೃತಿ ಮೂಡಿಸುತ್ತಿರುವ ಆಶಾ ಕಾರ್ಯಕರ್ತೆಯರು ನಿಜವಾದ ಕೊರೊನಾ ವಾರಿಯರ್ಸ್ ಎಂದು ಶಾಸಕ ಡಿ.ಸಿ.ಗೌರಿಶಂಕರ್ ಹೇಳಿದ್ದಾರೆ.
ತುಮಕೂರು ಜಿಲ್ಲೆಯ ಗೂಳೂರು ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮನೆ ಮನೆಗೂ ಹೋಗಿ ಆರೋಗ್ಯ, ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ ಎಂದು ಜಾಗೃತಿ ಮೂಡಿಸುತ್ತಿರುವ ಆಶಾ ಕಾರ್ಯಕರ್ತೆಯರು ನಿಜವಾದ ಕೊರೊನಾ ವಾರಿಯರ್ಸ್. ಹೀಗಾಗಿ ಸರ್ಕಾರ ಇವರ ಪರಿಶ್ರಮವನ್ನು ಪರಿಗಣಿಸಿ ತಿಂಗಳಿಗೆ 10,000 ರೂ. ವೇತನವನ್ನು ನಿಗದಿಪಡಿಸಬೇಕು. ಅವರಿಗೆ ಧೈರ್ಯ ತುಂಬುವಂತಹ ಕೆಲಸವನ್ನು ಸರ್ಕಾರ ಮಾಡಬೇಕಿದೆ ಎಂದರು.
ಈಗಾಗಲೇ ಹಲವಾರು ಬಾರಿ ಆಶಾ ಕಾರ್ಯಕರ್ತೆಯರು ವೇತನಕ್ಕಾಗಿ ಪ್ರತಿಭಟನೆ ನಡೆಸಿದ್ದಾರೆ. ಇದೀಗ ಇಂತಹ ಸಂಕಷ್ಟದ ಸಮಯದಲ್ಲಿ ಆಶಾ ಕಾರ್ಯಕರ್ತೆಯರು ತಮ್ಮ ಜೀವವನ್ನು ಪಣಕ್ಕಿಟ್ಟು ಕೆಲಸ ಮಾಡುತ್ತಿದ್ದಾರೆ ಎಂದರು.