ತುಮಕೂರು: ನಗರದಲ್ಲಿ ಈಗಾಗಲೇ ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಗಳು ವಿವಿಧ ಹಂತದಲ್ಲಿ ನಡೆಯುತ್ತಿವೆ. ಅವುಗಳಲ್ಲಿ ಕೆಲವೊಂದು ಜನರ ನಿರೀಕ್ಷೆಗೂ ಮೀರಿದ ಸ್ವಚ್ಛತೆಗೆ ಮತ್ತು ನಗರದ ಸೌಂದರ್ಯದ ಕಡೆ ಗಮನಹರಿಸಿ ಕೆಲವೊಂದು ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ. ಅದರಲ್ಲಿ ರಸ್ತೆ ಬದಿ ವ್ಯಾಪಾರಿ ವಲಯವೊಂದನ್ನು ಅಲ್ಲಲ್ಲಿ ತರಲಾಗುತ್ತಿದೆ.
ಸ್ಮಾರ್ಟ್ ಸಿಟಿಗೆ ಸ್ಮಾರ್ಟ್ ಪೆಟ್ಟಿಗೆ ಅಂಗಡಿಗಳ ಮೆರುಗು! - Etvbharat
ರಸ್ತೆ ಬದಿ ವ್ಯಾಪಾರಿಗಳಿಗೆ ಪುನರ್ವಸತಿ ಕಲ್ಪಿಸಲು ಮತ್ತು ಫುಟ್ ಪಾತ್ ಗಳನ್ನು ಸ್ವಚ್ಛವಾಗಿಡುವ ಉದ್ದೇಶವನ್ನು ತುಮಕೂರು ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಯೋಜನೆ ಅಧಿಕಾರಿಗಳು ಯೋಜನೆ ರೂಪಿಸಿದ್ದಾರೆ. ಸಂಚಾರ ವ್ಯವಸ್ಥೆ ಮತ್ತು ಸುತ್ತಲಿನ ವಾತಾವರಣ ಮಲಿನವಾಗುವುದನ್ನು ತಡೆಗಟ್ಟಲು ರಸ್ತೆ ಬದಿ ಇರುವ ಅಂಗಡಿ-ಮುಂಗಟ್ಟುಗಳನ್ನು ತೆರವುಗೊಳಿಸಲು ನಿರ್ಧರಿಸಲಾಗಿದೆ.
ರಸ್ತೆ ಬದಿ ವ್ಯಾಪಾರಿಗಳಿಗೆ ಪುನರ್ವಸತಿ ಕಲ್ಪಿಸಲು ಮತ್ತು ಫುಟ್ಪಾತ್ಗಳನ್ನು ಸ್ವಚ್ಛವಾಗಿಡುವ ಉದ್ದೇಶವನ್ನು ತುಮಕೂರು ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಯೋಜನೆ ಅಧಿಕಾರಿಗಳು ಯೋಜನೆ ರೂಪಿಸಿದ್ದಾರೆ. ಸಂಚಾರ ವ್ಯವಸ್ಥೆ ಮತ್ತು ಸುತ್ತಲಿನ ವಾತಾವರಣ ಮಲಿನವಾಗುವುದನ್ನು ತಡೆಗಟ್ಟಲು ರಸ್ತೆ ಬದಿ ಇರುವ ಅಂಗಡಿ-ಮುಂಗಟ್ಟುಗಳನ್ನು ತೆರವುಗೊಳಿಸಲು ನಿರ್ಧರಿಸಲಾಗಿದೆ. ಮೊದಲ ಹಂತವಾಗಿ ಅಶೋಕ ರಸ್ತೆ, ಖಾಸಗಿ ಬಸ್ ನಿಲ್ದಾಣ, ಮಂಡಿಪೇಟೆ, ಮರಿಯಮ್ಮ ನಗರ, ಸೋಮೇಶ್ವರ ಮುಖ್ಯ ರಸ್ತೆ ಸೇರಿದಂತೆ ಅನೇಕ ಮುಖ್ಯ ರಸ್ತೆಗಳಲ್ಲಿನ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ.
ಈಗಾಗಲೇ ಸೋಮೇಶ್ವರ ಮುಖ್ಯ ರಸ್ತೆಯಲ್ಲಿರುವ ಫ್ಲೈ ಓವರ್ ಕೆಳ ಭಾಗದಲ್ಲಿ ಸ್ಮಾರ್ಟ್ ಪೆಟ್ಟಿಗೆ ಅಂಗಡಿಗಳನ್ನು ನಿರ್ಮಿಸಲಾಗುತ್ತಿದೆ. ಇವುಗಳ ಸಮೀಪ ಹೂವಿನ ಗಿಡಗಳು ಸೇರಿದಂತೆ ಹಸಿರಿನ ವಾತಾವರಣ ನಿರ್ಮಿಸುವ ಉದ್ದೇಶ ಹೊಂದಲಾಗಿದೆ. ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಪತ್ರಗಳನ್ನು ಕೊಡಲಾಗುವುದು. ಅವರಿಗೆ ಮೂಲ ವ್ಯಾಪಾರೋದ್ಯಮದ ತರಬೇತಿ ನೀಡಲಾಗುವುದು. ಅದರಲ್ಲಿ ಸ್ವಚ್ಛತೆ ಮತ್ತು ಗ್ರಾಹಕರೊಂದಿಗಿನ ಬಾಂಧವ್ಯದ ಕುರಿತು ಮಾಹಿತಿ ನೀಡಲಾಗುವುದು. ಈ ಮೂಲಕ ಸ್ಮಾರ್ಟ್ ಬೀದಿ ಬದಿ ವ್ಯಾಪಾರಿಗಳನ್ನಾಗಿ ಪರಿವರ್ತಿಸುವ ಉದ್ದೇಶ ಹೊಂದಲಾಗಿದೆ. ಸ್ಮಾರ್ಟ್ ಬೀದಿಬದಿ ವಲಯಗಳು ಪ್ಲಾಸ್ಟಿಕ್ ಮುಕ್ತ ಮತ್ತು ವಾಹನ ಸಂಚಾರವಿಲ್ಲದ ವ್ಯವಸ್ಥೆಯಾಗಿರುತ್ತವೆ. ಹಳದಿ ಬಣ್ಣದ ರೇಖೆಗಳ ಮೂಲಕ ಇದನ್ನು ಗುರುತಿಸಲಾಗುವುದು. ಬೀದಿಬದಿ ವ್ಯಾಪಾರಿಗಳಿಗೆ ತಮ್ಮ ಮನೆಯ ಸಮೀಪದಲ್ಲೇ ಇರುವ ವಲಯದಲ್ಲಿ ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಿಕೊಡಲಾಗುವುದು.
ಈ ವಲಯದಲ್ಲಿ ಉಚಿತ ವೈಫೈ ಸೇವೆಯನ್ನು ಕೂಡ ಒದಗಿಸಲಾಗುತ್ತಿದೆ. ಸಾರ್ವಜನಿಕ ಶೌಚಾಲಯದ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಈಗಾಗಲೇ 800 ಮಂದಿ ಬೀದಿಬದಿ ವ್ಯಾಪಾರಿಗಳಿಗೆ ತುಮಕೂರು ಮಹಾನಗರ ಪಾಲಿಕೆಯಿಂದ ಗುರುತಿನ ಚೀಟಿಗಳನ್ನು ನೀಡಲಾಗಿದೆ. ಸಂಬಂಧಪಟ್ಟ ವಾರ್ಡ್ಗಳ ಸದಸ್ಯರೊಂದಿಗೆ ಸಂಪರ್ಕವಿಟ್ಟುಕೊಂಡು ಗುರುತಿನ ಚೀಟಿ ಪಡೆದಿರುವ ಬೀದಿಬದಿ ವ್ಯಾಪಾರಿಗಳಿಗೆ ಪೂರಕ ವ್ಯವಸ್ಥೆ ಕಲ್ಪಿಸಿ ಕೊಡುವ ಕುರಿತು ಚರ್ಚಿಸಲಾಗುತ್ತಿದೆ.