ಕರ್ನಾಟಕ

karnataka

ETV Bharat / state

ಸ್ಮಾರ್ಟ್​ ಸಿಟಿ ಕಾಮಗಾರಿ ವಿಳಂಬ ; ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಕೆಂಡಾಮಂಡಲ - ಭೈರತಿ ಬಸವರಾಜ್

ಇಷ್ಟೊಂದು ದುಡ್ಡು ಬಿಡುಗಡೆ ಮಾಡಿದ್ರೂ ಕೆಲಸ ನಡೆಯುತ್ತಿಲ್ಲದಿರುವುದು ದುರದೃಷ್ಟಕರ ಎಂದು ಸಿಡಿಮಿಡಿಗೊಂಡರು. ಗುತ್ತಿಗೆದಾರರು ಸ್ಥಳಕ್ಕೆ ಬಾರದೆ ನಿರ್ಲಕ್ಷ್ಯವಹಿಸಿರುವುದಕ್ಕೆ ಸಚಿವರು ಬೇಸರ..

ಸ್ಮಾರ್ಟ್​ ಸಿಟಿ ಕಾಮಗಾರಿ ವಿಳಂಬ
ಸ್ಮಾರ್ಟ್​ ಸಿಟಿ ಕಾಮಗಾರಿ ವಿಳಂಬ

By

Published : Jun 25, 2021, 5:32 PM IST

ತುಮಕೂರು :ನಗರದಲ್ಲಿ ಸ್ಮಾರ್ಟ್​​ ಸಿಟಿ ಯೋಜನೆಯಡಿ ನಡೆಯುತ್ತಿರುವ ನೂತನ ಬಸ್ ನಿಲ್ದಾಣದ ಕಾಮಗಾರಿ ವಿಳಂಬ ಹಾಗೂ ಕಾಮಗಾರಿ ಪರಿಶೀಲನೆ ವೇಳೆ ಸ್ಥಳಕ್ಕೆ ಬಾರದ ಗುತ್ತಿಗೆದಾರರ ವಿರುದ್ಧ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಕೆಂಡಾಮಂಡಲರಾಗಿದ್ದಾರೆ.

ಸ್ಮಾರ್ಟ್​ ಸಿಟಿ ಕಾಮಗಾರಿ ವಿಳಂಬ, ಅಧಿಕಾರಿಗಳ ವಿರುದ್ಧ ಸಚಿವರು ಕಿಡಿ..

ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್​​ ಸಿಟಿ ಕಾಮಗಾರಿಗಳ ಪರಿಶೀಲನೆಗೆ ಆಗಮಿಸಿದ್ದ ಸಚಿವ ಭೈರತಿ ಬಸವರಾಜ್, ಐದು ತಿಂಗಳ ಹಿಂದಷ್ಟೇ ನಗರಕ್ಕೆ ಬಂದಿದ್ದೆ. ಆ ವೇಳೆಯಲ್ಲಿ ನಡೆಯುತ್ತಿದ್ದ ಬಸ್ ನಿಲ್ದಾಣದ ಕಾಮಗಾರಿ ಅದೇ ಹಂತದಲ್ಲಿದೆ. ಕಾಮಗಾರಿ ಮಾಡದೆ ಮತ್ತೇನು ಮಾಡ್ತಿದ್ದೀರಾ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಕೆಎಸ್​​ಆರ್​ಟಿಸಿ ಅಧಿಕಾರಿಗಳು ಮತ್ತು ಸ್ಮಾರ್ಟ್​​ ಸಿಟಿ ಅಧಿಕಾರಿಗಳ ನಡುವೆ ಸಮನ್ವಯತೆ ಇಲ್ಲದಿರುವುದು ಸರಿಯಲ್ಲ. ಇಷ್ಟೊಂದು ದುಡ್ಡು ಬಿಡುಗಡೆ ಮಾಡಿದ್ರೂ ಕೆಲಸ ನಡೆಯುತ್ತಿಲ್ಲದಿರುವುದು ದುರದೃಷ್ಟಕರ ಎಂದು ಸಿಡಿಮಿಡಿಗೊಂಡರು. ಗುತ್ತಿಗೆದಾರರು ಸ್ಥಳಕ್ಕೆ ಬಾರದೆ ನಿರ್ಲಕ್ಷ್ಯವಹಿಸಿರುವುದಕ್ಕೆ ಸಚಿವರು ಬೇಸರ ವ್ಯಕ್ತಪಡಿಸಿದರು. ಈ ವೇಳೆ ಶಾಸಕ ಜ್ಯೋತಿ ಗಣೇಶ್ ಸೇರಿ ಹಲವರು ಉಪಸ್ಥಿತರಿದ್ದರು.

ABOUT THE AUTHOR

...view details