ತುಮಕೂರು: ಲಾಕ್ಡೌನ್ನಿಂದ ಸ್ಥಗಿತಗೊಂಡಿದ್ದ ಸ್ಮಾರ್ಟ್ ಸಿಟಿ ಕಾಮಗಾರಿಗಳಿಗೆ ಲಾಕ್ಡೌನ್ ಸಡಿಕಲಿಯಿಂದ ಮತ್ತೆ ಚಾಲನೆ ದೊರೆತಿದೆ.
ತುಮಕೂರಿನಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳು ಪುನರಾರಂಭ: ನಿತ್ಯವೂ ಕಾರ್ಮಿಕರ ಆರೋಗ್ಯ ತಪಾಸಣೆ - ತುಮಕೂರು ಜಿಲ್ಲೆ
ತುಮಕೂರಿನಲ್ಲಿ ಲಾಕ್ಡೌನ್ನಿಂದ ಸ್ಥಗಿತವಾಗಿದ್ದ ಸ್ಮಾರ್ಟ್ ಸಿಟಿ ಕಾಮಗಾರಿಗಳು ಮತ್ತೆ ಆರಂಭವಾಗಿವೆ.
ಲಾಕ್ಡೌನ್ ನಂತರ ಸರ್ಕಾರದ ಸೂಚನೆ ಮೇರೆಗೆ ಕಾಮಗಾರಿಗಳನ್ನು ನಿಲ್ಲಿಸಲಾಗಿತ್ತು. ಅಲ್ಲದೆ ಕಾರ್ಮಿಕರಿಗೂ ತಮ್ಮ ಊರುಗಳಿಗೆ ಹೋಗಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಕೆಲಸ ನಡೆಯುತ್ತಿದ್ದ ಸ್ಥಳದಲ್ಲಿಯೇ ಇದ್ದ ಶೆಡ್ಗಳಲ್ಲಿ ಇರಲು ಗುತ್ತಿಗೆದಾರರು ವ್ಯವಸ್ಥೆ ಮಾಡಿದ್ದರು. ಇದೀಗ ಕಾಮಗಾರಿಗಳ ಆರಂಭಕ್ಕೆ ಅವಕಾಶ ನೀಡಿರುವುದರಿಂದ ಸ್ಥಳದಲ್ಲಿಯೇ ಇರುವ ಕಾರ್ಮಿಕರನ್ನು ಬಳಸಿಕೊಂಡು ಗುತ್ತಿಗೆಗದಾರರು ಸ್ಮಾಟ್ ಸಿಟಿ ಕಾಮಗಾರಿಗಳನ್ನು ಆರಂಭಿಸಿದ್ದಾರೆ.
ನಗರದಲ್ಲಿ ಸುಮಾರು 60 ಕಾಮಗಾರಿಗಳು ಸಂಪೂರ್ಣ ಸ್ಥಗಿತಗೊಂಡಿದ್ದವು. ಅದರಲ್ಲಿ ಸ್ಮಾರ್ಟ್ ಲೈಬ್ರರಿ, ಬಸ್ ನಿಲ್ದಾಣದ ಕಾಮಗಾರಿಗಳು ಆರಂಭಗೊಂಡಿವೆ. ವೈದ್ಯಕೀಯ ಸಿಬ್ಬಂದಿ ಕಾಮಗಾರಿ ನಡೆಯುತ್ತಿರುವ ಸ್ಥಳಗಳಿಗೆ ತೆರಳಿ ನಿತ್ಯ ಥರ್ಮಲ್ ಸ್ಕ್ರೀನಿಂಗ್ ಮೂಲಕ ಕಾರ್ಮಿಕರನ್ನು ಪರೀಕ್ಷೆಗೆ ಒಳಪಡಿಸುತ್ತಿದ್ದಾರೆ. ಇನ್ನುಳಿದ ಕಾಮಗಾರಿಗಳನ್ನು ಆರಂಭಿಸಲು ಕಾರ್ಮಿಕರು ಸಿಗುತ್ತಿಲ್ಲ. ಸುಮಾರು 750 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳು ಇವಾಗಿವೆ.