ತುಮಕೂರು: ಏಳು ಮಂದಿಗೆ ಸಂಪುಟದಲ್ಲಿ ಸಚಿವ ಸ್ಥಾನದ ಅವಕಾಶ ಕೊಡುತ್ತೇನೆ ಎಂದು ಈಗಾಗಲೇ ಮುಖ್ಯಮಂತ್ರಿ ಹೇಳಿದ್ದಾರೆ. ಅಲ್ಲದೆ ಪಕ್ಷವೂ ಕೂಡ ಈ ಕುರಿತು ತೀರ್ಮಾನಿಸಿದೆ ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
ತುಮಕೂರಲ್ಲಿ ಜನಸೇವಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ವೇಳೆ ಮಾತನಾಡಿದ ಅವರು, ನಮ್ಮ ಪಕ್ಷವನ್ನು ಅಧಿಕಾರಕ್ಕೆ ತಂದವರಿಗೆ ಅವಕಾಶ ನೀಡಬೇಕಾಗುತ್ತದೆ. ನಮ್ಮ ಪಕ್ಷದಲ್ಲಿರುವ ಸೀನಿಯರ್ ಲೀಡರ್ಗಳು ಕೂಡ ಅವಕಾಶ ಮಾಡಿಕೊಡಬೇಕಾಗುತ್ತದೆ ಎಂದರು.