ತುಮಕೂರು :ಜಿಲ್ಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಂಡು ಬಂದಿರೋದು ಹೊರತುಪಡಿಸಿದ್ರೆ ಇನ್ನುಳಿದಂತೆ ಎಸ್ಎಸ್ಎಲ್ಸಿ ಪರೀಕ್ಷೆ ನಿರಾತಂಕವಾಗಿ ಪೂರ್ಣಗೊಂಡಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಕಾಮಾಕ್ಷಿ ಹೇಳಿದ್ದಾರೆ.
ಇನ್ನೊಂದೆಡೆ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ದೂರ ಮಾಡಲು ಶಿಕ್ಷಣ ಇಲಾಖೆ ಸಿಬ್ಬಂದಿ ನಿರಂತರವಾಗಿ ಯೋಜನಾ ಬದ್ಧವಾಗಿ ಕೆಲಸ ಮಾಡಿದ್ದೇ ಇದಕ್ಕೆ ಕಾರಣವಾಗಿದೆ. ಪ್ರತಿ ಸರ್ಕಾರಿ ಶಾಲಾ ಶಿಕ್ಷಕರಿಗೆ ಇಂತಿಷ್ಟು ವಿದ್ಯಾರ್ಥಿಗಳು ಎಂಬಂತೆ ಒಂದು ರೀತಿ ದತ್ತು ನೀಡಲಾಗಿತ್ತು. ಅಂದ್ರೆ ಎಸ್ಎಸ್ಎಲ್ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಹಾಜರಾಗುವಂತೆ ನಿತ್ಯ ಪೋಷಕರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಧೈರ್ಯ ಹೇಳಲಾಗುತ್ತಿತ್ತು. ಅಲ್ಲದೆ ವಿದ್ಯಾರ್ಥಿ ಪರೀಕ್ಷೆ ಬರೆದ ನಂತರ ಮನೆಗೆ ತಲುಪಿದ್ದಾನೆಯೋ ಇಲ್ಲವೋ ಎಂಬುದನ್ನು ಕೂಡ ಸಂಬಂಧಪಟ್ಟ ಶಿಕ್ಷಕರು ಖಾತರಿಪಡಿಸಿಕೊಳ್ಳುತ್ತಿದ್ದರು.