ತುಮಕೂರು:ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಗುರುವಾರ ನಗರದ ಕನ್ನಡ ಭವನದಲ್ಲಿ ರಾಜ್ಯ ಸಮಿತಿ ಸಭೆಯನ್ನು ನಡೆಸಲಾಯಿತು.
ತುಮಕೂರಿನಲ್ಲಿ ರಾಜ್ಯ ರೈತ ಸಂಘ ಸಭೆ; ಸಮಸ್ಯೆಗೆ ಸ್ಪಂದಿಸದಿದ್ದರೆ ಪ್ರತಿಭಟನೆ ಎಚ್ಚರಿಕೆ
ಕರ್ನಾಟಕ ರಾಜ್ಯ ಭೀಕರ ಬರಗಾಲದಿಂದ ಎದುರಿಸುತ್ತಿರುವ ಸಮಸ್ಯೆಗಳು, ರೈತರ ಸಾಲ ಮನ್ನಾ, 2019ರ ಭೂ ಸ್ವಾಧೀನ ಕಾಯ್ದೆ ರದ್ದು, ಹನಿ ನೀರಾವರಿಗೆ ನೀಡುತ್ತಿರುವ ಸಹಾಯಧನದಲ್ಲಿ ತಾರತಮ್ಯ, ಕೇಂದ್ರ ಸರ್ಕಾರದ ಆರ್ಥಿಕ ನೀತಿ ಎಂಬ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ಕರ್ನಾಟಕ ರಾಜ್ಯವು ಭೀಕರ ಬರಗಾಲದಿಂದ ಎದುರಿಸುತ್ತಿರುವ ಸಮಸ್ಯೆಗಳು, ರೈತರ ಸಾಲ ಮನ್ನಾ, 2019ರ ಭೂ ಸ್ವಾಧೀನ ಕಾಯ್ದೆ ರದ್ದು, ಹನಿ ನೀರಾವರಿಗೆ ನೀಡುತ್ತಿರುವ ಸಹಾಯಧನದಲ್ಲಿ ತಾರತಮ್ಯ, ಕೇಂದ್ರ ಸರ್ಕಾರದ ಆರ್ಥಿಕ ನೀತಿ ಎಂಬ ಜ್ವಲಂತ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು.
ಬೆಳಗಾವಿ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಸತ್ಯಪ್ಪ ಮಾತನಾಡಿ, ಜಿಲ್ಲೆಯ ನದಿಗಳು ತುಂಬಿದ ಪರಿಣಾಮ ಪ್ರವಾಹ ಉಂಟಾಗಿ ಮನೆ ಆಸ್ತಿಪಾಸ್ತಿಯನ್ನು ಕಳಕೊಂಡವರಿಗೆ ಸ್ಥಳ ಪರಿಶೀಲನೆ ನಡೆಸಿ, ಸೂಕ್ತ ಪರಿಹಾರ ನೀಡಬೇಕೆಂದು ಈಗಾಗಲೇ ಬೆಳಗಾವಿಯ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಇದಕ್ಕೆ ಸೂಕ್ತ ಪರಿಹಾರ ಇನ್ನೂ ದೊರೆತಿಲ್ಲ, ಇನ್ನು ಕೆಲವರಿಗೆ ಪರಿಹಾರವಾಗಿ ಚೆಕ್ ವಿತರಣೆ ಮಾಡಲಾಗಿದೆ. ಅದರಡಿ ಬ್ಯಾಂಕ್ಗಳಿಗೆ ಹೋದರೆ ಹಣ ಬಂದಿಲ್ಲ ಎನ್ನುತ್ತಾರೆ. ರೈತರು ಅನೇಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವುದರ ಜೊತೆಗೆ ಚೆಕ್ ಹಿಡಿದುಕೊಂಡು ಬ್ಯಾಂಕ್ಗಳಿಗೆ ಓಡಾಡುವುದೇ ಒಂದು ಕೆಲಸವಾಗಿಬಿಟ್ಟಿದೆ. ಈಗಾಗಲೇ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಗಮನಕ್ಕೂ ತರಲಾಗಿದೆ ಎಂದರು. ತಕ್ಷಣದಿಂದಲೇ ರೈತರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ಕೊಟ್ಟರು.