ಕರ್ನಾಟಕ

karnataka

ETV Bharat / state

ಸೆಪ್ಟಂಬರ್ 14 ರಿಂದ ಚಲಿಸು ಕರ್ನಾಟಕ ಹೆಸರಿನಲ್ಲಿ ರಾಜ್ಯದಾದ್ಯಂತ ಸೈಕಲ್ ಯಾತ್ರೆ: ಬಿ.ಎಸ್​ ಮಲ್ಲಿಕಾರ್ಜುನಯ್ಯ - Cycle yathra Tumkur

ಸೆಪ್ಟಂಬರ್ 14ರಿಂದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಚಲಿಸು ಕರ್ನಾಟಕ ಹೆಸರಿನಲ್ಲಿ ರಾಜ್ಯದಾದ್ಯಂತ ಸುಮಾರು 2,700 ಕಿಲೋಮೀಟರ್ ಸೈಕಲ್ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯದರ್ಶಿ ಬಿ.ಎಸ್​ ಮಲ್ಲಿಕಾರ್ಜುನಯ್ಯ ತಿಳಿಸಿದರು.

Tumkur
ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನಯ್ಯ

By

Published : Sep 9, 2020, 6:32 PM IST

ತುಮಕೂರು:ರಾಜ್ಯದ ಜನರನ್ನು ಜಾಗೃತಗೊಳಿಸುವ ನಿಟ್ಟಿನಲ್ಲಿ ಸೆಪ್ಟಂಬರ್ 14ರಿಂದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಚಲಿಸು ಕರ್ನಾಟಕ ಹೆಸರಿನಲ್ಲಿ ರಾಜ್ಯದಾದ್ಯಂತ ಸುಮಾರು 2,700 ಕಿಲೋಮೀಟರ್ ಸೈಕಲ್ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯದರ್ಶಿ ಬಿ.ಎಸ್​ ಮಲ್ಲಿಕಾರ್ಜುನಯ್ಯ ತಿಳಿಸಿದರು.

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನಯ್ಯ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್-19ನಿಂದಾಗಿ ಕರ್ನಾಟಕ ರಾಜ್ಯ ಸಂಪೂರ್ಣವಾಗಿ ತತ್ತರಗೊಂಡಿದ್ದು, ಚಲನಶೀಲತೆಯಿಲ್ಲದೆ ನಿಷ್ಕ್ರಿಯಗೊಂಡಿದೆ. ಕೋವಿಡ್-19 ಸಮಯದಲ್ಲಿ ಮಾನವೀಯತೆ ತೋರಬೇಕಿರುವ ಸರ್ಕಾರ ಮಾನವೀಯತೆ ಎಂಬುದನ್ನು ಮರೆತಿದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಕೆಸರೆರಚಾಟ ಮಾಡುವ ಮೂಲಕ ವಸ್ತುನಿಷ್ಠ ಕಾರ್ಯಗಳಿಗೆ ಬೆಲೆ ನೀಡದೇ ಕಾಲಹರಣ ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯದ ಜನರನ್ನು ಜಾಗೃತಗೊಳಿಸುವ ನಿಟ್ಟಿನಲ್ಲಿ ಸೆಪ್ಟಂಬರ್ 14ರಿಂದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು 'ಚಲಿಸು ಕರ್ನಾಟಕ' ಹೆಸರಿನಲ್ಲಿ ರಾಜ್ಯದಾದ್ಯಂತ ಸುಮಾರು 2,700 ಕಿಲೋಮೀಟರ್ ಸೈಕಲ್ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಇನ್ನು ಮುಂದೆ ಶಿರಾದಲ್ಲಿ ನಡೆಯಲಿರುವ ಉಪಚುನಾವಣೆಗೆ ಈಗಿನಿಂದಲೇ ತಯಾರಿ ನಡೆಸಿದ್ದು, ಹಣ-ಹೆಂಡ ಆಮಿಷಗಳಿಲ್ಲದೇ ಜನರನ್ನು ಗೆಲ್ಲಿಸುವಂತಹ ಚುನಾವಣಾ ಪ್ರಕ್ರಿಯೆಗೆ ಶಿರಾ ತಾಲೂಕಿನ ಜನರನ್ನು ಎಚ್ಚರಿಸುವ ಕಾರ್ಯವನ್ನು 'ಚಲಿಸು ಕರ್ನಾಟಕ' ಸೈಕಲ್ ಯಾತ್ರೆಯ ಮೂಲಕ ಪ್ರಾರಂಭಿಸಲಾಗುವುದು ಎಂದರು.

ABOUT THE AUTHOR

...view details