ತುಮಕೂರು:ನಗರದ ಟೌನ್ ಹಾಲ್ ವೃತ್ತದಿಂದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದವರೆಗೆ ಐನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಶೀಘ್ರವಾಗಿ ಉಚಿತ ಬಸ್ ಪಾಸ್ ವಿತರಣೆ ಮಾಡಬೇಕೆಂದು ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಉಚಿತ ಬಸ್ ಪಾಸ್ಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ - undefined
ಕಳೆದ ಬಾರಿ ಸರ್ಕಾರ ಆದೇಶ ಹೊರಡಿಸಿದಂತಹ ಉಚಿತ ಬಸ್ ಪಾಸ್ ವ್ಯವಸ್ಥಿತವಾಗಿ ಜಾರಿಯಾಗಿಲ್ಲ. ಸರ್ಕಾರ ಕೇವಲ ಆಶ್ವಾಸನೆ ನೀಡುವ ಮೂಲಕ ವಿದ್ಯಾರ್ಥಿಗಳಿಗೆ ವಂಚನೆ ಮಾಡುತ್ತಿದೆ ಎಂದು ಆರೋಪಿಸಿ, ತುಮಕೂರಿನಲ್ಲಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು.
ಶಾಲಾ-ಕಾಲೇಜುಗಳು ಪ್ರಾರಂಭವಾಗಿ ಒಂದೂವರೆ ತಿಂಗಳು ಕಳೆದರೂ ಸರಿಯಾಗಿ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆ ಮಾಡಿಲ್ಲ. ಕಳೆದ ಬಾರಿಯ ಸರ್ಕಾರ ಆದೇಶ ಹೊರಡಿಸಿದಂತಹ ಉಚಿತ ಬಸ್ ಪಾಸ್ ವ್ಯವಸ್ಥಿತವಾಗಿ ಜಾರಿಯಾಗಿಲ್ಲ. ಸರ್ಕಾರ ಕೇವಲ ಆಶ್ವಾಸನೆ ನೀಡುವ ಮೂಲಕ ವಿದ್ಯಾರ್ಥಿಗಳಿಗೆ ವಂಚನೆ ಮಾಡುತ್ತಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಬಸ್ ಪಾಸ್ ಅರ್ಜಿ ನೀಡಿ ಹತ್ತು ದಿನಗಳು ಕಳೆದರೂ ವಿತರಿಸುವಲ್ಲಿ ಅಧಿಕಾರಿಗಳು ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.
ಬಸ್ ಪಾಸ್ ವಿತರಣೆ ಮಾಡುತ್ತಿರುವಲ್ಲಿ ವಿಳಂಬವಾಗುತ್ತಿರುವ ಸಂಗತಿಯನ್ನು ನನ್ನ ಗಮನಕ್ಕೆ ಇಂದು ತಂದಿದ್ದಾರೆ. ಅದರ ಬಗ್ಗೆ ಹೆಚ್ಚು ಗಮನಹರಿಸಿ, ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಶೀಘ್ರವಾಗಿ ಬಸ್ ಪಾಸ್ ವಿತರಿಸಲಾಗುವುದು ಎಂದು ಕೆ.ಎಸ್.ಆರ್.ಟಿ.ಸಿ.ಯ ವಿಭಾಗೀಯ ಜಿಲ್ಲಾಧಿಕಾರಿ ಗಜೇಂದ್ರಕುಮಾರ್ ತಿಳಿಸಿದರು.