ಕರ್ನಾಟಕ

karnataka

ETV Bharat / state

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಬೇಕು: ಡಾ. ಪ್ರತಾಪ್ ಸಿಂಗ್ ತಿವಾರಿ - undefined

ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚಾಗಿ ಭಾಗವಹಿಸಿ ನಿಮ್ಮ ಕನಸು ನನಸು ಮಾಡಿಕೊಳ್ಳಿ ಎಂದು ಗುಲ್ಬರ್ಗ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಪ್ರತಾಪ್ ಸಿಂಗ್ ತಿವಾರಿ ಹೇಳಿದರು.

ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಅಂತರ್​ವಿಭಾಗ ಕ್ರೀಡಾಕೂಟದ ಸಮಾರೋಪ ಸಮಾರಂಭ ಹಾಗೂ ವಿಶ್ವ ರೆಡ್ ಕ್ರಾಸ್ ದಿನಾಚರಣೆಯ ಕಾರ್ಯಕ್ರಮ

By

Published : May 9, 2019, 1:43 AM IST

ತುಮಕೂರು:ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚಾಗಿ ಭಾಗವಹಿಸಿ ತಮ್ಮ ಕನಸುಗಳನ್ನು ನನಸು ಮಾಡಿಕೊಳ್ಳಬೇಕೆಂದು ಗುಲ್ಬರ್ಗ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಪ್ರತಾಪ್ ಸಿಂಗ್ ತಿವಾರಿ ಹೇಳಿದರು.

ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಅಂತರ ​ವಿಭಾಗ ಕ್ರೀಡಾಕೂಟದ ಸಮಾರೋಪ ಸಮಾರಂಭ ಹಾಗೂ ವಿಶ್ವ ರೆಡ್ ಕ್ರಾಸ್ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ರೆಡ್ ಕ್ರಾಸ್ ಉತ್ತಮ ಸೇವಾ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ಯುದ್ಧಗಳ ಸಂದರ್ಭದಲ್ಲಿ ಈ ಸಂಸ್ಥೆ ಸಹಾಯ ಹಸ್ತ ನೀಡುವ ಮೂಲಕ ವಿಶ್ವ ಮಟ್ಟದಲ್ಲಿ ಪ್ರಮುಖ ಸ್ಥಾನವನ್ನು ಪಡೆದುಕೊಂಡಿದೆ ಎಂದರು.

ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಅಂತರ್​ವಿಭಾಗ ಕ್ರೀಡಾಕೂಟದ ಸಮಾರೋಪ ಸಮಾರಂಭ ಹಾಗೂ ವಿಶ್ವ ರೆಡ್ ಕ್ರಾಸ್ ದಿನಾಚರಣೆಯ ಕಾರ್ಯಕ್ರಮ

ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ವೈ.ಎಸ್ ಸಿದ್ದೇಗೌಡ ಮಾತನಾಡಿ, ಕ್ರೀಡೆ ಜೀವನದ ಜತೆಗೆ ಆರೋಗ್ಯಕ್ಕೂ ಮುಖ್ಯ. ದೈಹಿಕ ಮತ್ತು ಮಾನಸಿಕ ಭಾವನೆ, ಆಧ್ಯಾತ್ಮಿಕ ಇವೆಲ್ಲದ್ದಕ್ಕೂ ಕ್ರೀಡೆ ಅಗತ್ಯವಾದುದು. ವಿಶ್ವವಿದ್ಯಾಲಯಗಳು ಶೈಕ್ಷಣಿಕ ಕಾರ್ಖಾನೆಗಳಂತೆ ಕಾರ್ಯನಿರ್ವಹಿಸುತ್ತಿದೆ. ಎಲ್ಲ ವಿದ್ಯಾರ್ಥಿಗಳನ್ನು ಸಮಾನವಾಗಿ ಕಂಡು, ವಿದ್ಯಾದಾನ ಮಾಡಿ, ಅವರನ್ನು ಒಂದು ವಿದ್ಯಾ ಭಂಡಾರವನ್ನಾಗಿ ತಯಾರು ಮಾಡುತ್ತಿದೆ ಎಂದರು.

For All Latest Updates

TAGGED:

ABOUT THE AUTHOR

...view details