ಕರ್ನಾಟಕ

karnataka

By

Published : Mar 3, 2020, 11:17 AM IST

ETV Bharat / state

ತುಮಕೂರು ಮಹಾನಗರಪಾಲಿಕೆ ಆಯುಕ್ತರ ಮಿಂಚಿನ ಕಾರ್ಯಾಚರಣೆ... ಒಂದೇ ದಿನದಲ್ಲಿ ಕೋಟಿ ರೂ. ಕಂದಾಯ, ತೆರಿಗೆ ವಸೂಲಿ

ಪಾಲಿಕೆ ವ್ಯಾಪ್ತಿಗೆ ಬರುವ ಖಾಸಗಿ ಬಸ್ ನಿಲ್ದಾಣದ ಬಳಿಯ ಅಂಗಡಿ ಮಾಲೀಕರು ಅನೇಕ ವರ್ಷಗಳಿಂದ ಬಾಡಿಗೆ ಕಟ್ಟದೆ ಬಾಕಿ ಉಳಿಸಿಕೊಂಡಿದ್ದರು. ಹೀಗಾಗಿ ಸಿಬ್ಬಂದಿಯೊಂದಿಗೆ ದಿಢೀರ್ ದಾಳಿ ನಡೆಸಿ ಆಯುಕ್ತ ಭೂಬಾಲನ್​, ಬರೋಬ್ಬರಿ 80 ಲಕ್ಷ ರೂ. ಬಾಡಿಗೆ ವಸೂಲಿ ಮಾಡಿದ್ದಾರೆ. ಜೊತೆಗೆ ಸುಮಾರು 20 ಲಕ್ಷ ರೂ. ಆಸ್ತಿ ತೆರಿಗೆ ಮತ್ತು ನೀರಿನ ತೆರಿಗೆಯನ್ನು ವಸೂಲಿ ಮಾಡಿದ್ದಾರೆ.

Tax collection in Tumkur by the Commissioner
ಒಂದು ಕೋಟಿ ತೆರಿಗೆ ವಸೂಲಿ

ತುಮಕೂರು: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಿಂಚಿನ ಸಂಚಾರ ಕಾರ್ಯಾಚರಣೆ ನಡೆಸಿದ ಆಯುಕ್ತ ಭೂಬಾಲನ್ ಒಂದೇ ದಿನದಲ್ಲಿ ಬರೋಬ್ಬರಿ ಒಂದು ಕೋಟಿ ರೂಪಾಯಿ ಕಂದಾಯ, ತೆರಿಗೆ ವಸೂಲಿ ಮಾಡಿದ್ದಾರೆ.

ಪಾಲಿಕೆ ವ್ಯಾಪ್ತಿಗೆ ಬರುವ ಖಾಸಗಿ ಬಸ್ ನಿಲ್ದಾಣದ ಬಳಿಯ ಅಂಗಡಿ ಮಾಲೀಕರು ಅನೇಕ ವರ್ಷಗಳಿಂದ ಬಾಡಿಗೆ ಕಟ್ಟದೆ ಬಾಕಿ ಉಳಿಸಿಕೊಂಡಿದ್ದರು. ಹೀಗಾಗಿ ಸಿಬ್ಬಂದಿಯೊಂದಿಗೆ ದಿಢೀರ್ ದಾಳಿ ನಡೆಸಿದ ಆಯುಕ್ತ ಭೂಬಾಲನ್​, ಬರೋಬ್ಬರಿ 80 ಲಕ್ಷ ರೂ. ಬಾಡಿಗೆ ವಸೂಲಿ ಮಾಡಿದ್ದಾರೆ. ಜೊತೆಗೆ ಸುಮಾರು 20 ಲಕ್ಷ ರೂ. ಆಸ್ತಿ ತೆರಿಗೆ ಮತ್ತು ನೀರಿನ ತೆರಿಗೆ ವಸೂಲಿ ಮಾಡಿದ್ದಾರೆ.

ಆಯುಕ್ತರಿಂದ ತೆರಿಗೆ ವಸೂಲಿ ಕಾರ್ಯಾಚರಣೆ

ಅಲ್ಲದೆ ಬಾಕಿ ಬಾಡಿಗೆ ಕಟ್ಟಲು ಹಿಂದೇಟು ಹಾಕಿದ ಮಳಿಗೆಗಳನ್ನು ಪಾಲಿಕೆ ವಶಕ್ಕೆ ತೆಗೆದುಕೊಂಡಿದ್ದಾರೆ.

For All Latest Updates

ABOUT THE AUTHOR

...view details