ತುಮಕೂರು:ಕೊರೊನಾ ಬಿಕ್ಕಟ್ಟಿನ ನಡುವೆ ಸರ್ಕಾರಿ ಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆ ಸಂಪೂರ್ಣ ಸ್ತಬ್ಧವಾಗಿದೆ. ಈ ನಡುವೆ ಮಧುಗಿರಿ ತಾಲೂಕಿನ ಶಾಲೆಯೊಂದರ ಶಿಕ್ಷಕರು ಮಾತ್ರ ಕೈಕಟ್ಟಿ ಕೂರದೆ ಶಾಲಾ ಕಟ್ಟಡದ ದುರಸ್ತಿ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದು ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿದೆ.
ಮಧುಗಿರಿ ತಾಲೂಕಿನ ವಡ್ಡರಹಟ್ಟಿ ಗ್ರಾಮದ ನಮ್ಮೂರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಮೂವರು ಶಿಕ್ಷಕರು ಶಾಲಾ ಕಟ್ಟಡಕ್ಕೆ ಬಣ್ಣ ಬಳಿದು ವಾತಾವರಣವನ್ನು ಸುಸ್ಥಿತಿಯಲ್ಲಿಡುತ್ತಿದ್ದಾರೆ.