ತುಮಕೂರು:ಮುಂದಿನ ವಿಧಾನಸಭೆ ಅಧಿವೇಶನಕ್ಕೂ ಮುನ್ನ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ತಿದ್ದುಪಡಿ ತರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.
ಅಧಿವೇಶನಕ್ಕೂ ಮುನ್ನ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ತಿದ್ದುಪಡಿ: ಸಚಿವ ಸುರೇಶ್ ಕುಮಾರ್ - ಸುರೇಶ್ ಕುಮಾರ್
ನಾನು ಸಚಿವನಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನವೇ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಕಾನೂನು ಆಗಿತ್ತು. ಅದರ ಪ್ರಕ್ರಿಯೆಗಳು ಆರಂಭವಾಗಿದ್ದವು. ಕೆಲವು ಗೊಂದಲಗಳ ನಂತರ ಆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು. ಈಗ ಪುನಃ ಆರಂಭಿಸಲಾಗಿದೆ ಎಂದರು.
ನಗರದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಸಚಿವನಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನವೇ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಕಾನೂನು ಆಗಿತ್ತು. ಅದರ ಪ್ರಕ್ರಿಯೆಗಳು ಆರಂಭವಾಗಿದ್ದವು. ಕೆಲವು ಗೊಂದಲಗಳ ನಂತರ ಆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು. ಈಗ ಪುನಃ ಆರಂಭಿಸಲಾಗಿದೆ ಎಂದರು.
ಪ್ರಧಾನಿ ಮೋದಿ ಕಾಲಿಟ್ಟದ್ದೇ ಚಂದ್ರಯಾನ ಸಕ್ಸಸ್ಗೆ ಅಪಶಕುನವಾಗಿತ್ತು ಎಂಬ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದ ಸಚಿವರು, ಜೆಡಿಎಸ್ ಮತ್ತು ಕಾಂಗ್ರೆಸ್ ಸೇರಿಕೊಂಡು ಸರ್ಕಾರ ಮಾಡಿದ್ರು. ಸಿದ್ದರಾಮಯ್ಯನವರು ಮೂಢನಂಬಿಕೆ ವಿರುದ್ಧ ಕಾನೂನು ತಂದಿದ್ದಾರೆ. ಅದನ್ನು ಕುಮಾರಸ್ವಾಮಿಯವರು ಗಮನಿಸಲಿ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ ಮುನ್ನಡೆದರು.