ತುಮಕೂರು: ಅನರ್ಹ ಶಾಸಕರು ಸಮ್ಮಿಶ್ರ ಸರ್ಕಾರದಿಂದ ಹೊರ ಬಂದಿರುವುದರಿಂದಲೇ ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಹೀಗಾಗಿ ಅನರ್ಹರಿಗೆ ಅನ್ಯಾಯ ಮಾಡಲು ಆಗುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆಎಸ್ ಈಶ್ವರಪ್ಪ ತಿಳಿಸಿದ್ದಾರೆ.
ಸಮ್ಮಿಶ್ರ ಸರ್ಕಾರದಿಂದ ಶಾಸಕರು ಹೊರ ಬಂದಿದ್ದರಿಂದಲೇ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ : ಕೆ ಎಸ್ ಈಶ್ವರಪ್ಪ - latest tumkur news
ಅನರ್ಹ ಶಾಸಕರು ಸಮ್ಮಿಶ್ರ ಸರ್ಕಾರದಿಂದ ಹೊರ ಬಂದಿರುವುದರಿಂದಲೇ ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಹೀಗಾಗಿ ಅನರ್ಹರಿಗೆ ಅನ್ಯಾಯ ಮಾಡಲು ಆಗುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆಎಸ್ ಈಶ್ವರಪ್ಪ ತಿಳಿಸಿದ್ದಾರೆ.
ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ನಡೆದ ಕಾಡು ಸಿದ್ದೇಶ್ವರ ಮಠದ ಸ್ವಾಮೀಜಿಗಳ 25ನೇ ವರ್ಷದ ಪಟ್ಟಾಧಿಕಾರ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಈಶ್ವರಪ್ಪ, ಅನರ್ಹ ಶಾಸಕರು ಹೇಳುವ ದಿಕ್ಕಿನಲ್ಲಿ ನಾವು ನಡೆಯುತ್ತೇವೆ ಎಂದು ತಿಳಿಸಿದರು.
ದೇವೇಗೌಡರು ಬಿಜೆಪಿ ಸರ್ಕಾರಕ್ಕೆ ಬೆಂಬಲಿಸುವ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಅವರು, ನಮಗೆ ಯಾರ ಭಯವಿಲ್ಲ. ರಾಜ್ಯದ ಮತದಾರರು ಬಿಜೆಪಿಗೆ ಸರ್ಕಾರ ರಚಿಸಬೇಕು ಎಂದು 104 ಸ್ಥಾನಗಳನ್ನು ನೀಡಿದ್ದಾರೆ. ಅಧಿಕಾರದಲ್ಲಿದ್ದ ಕಾಂಗ್ರೆಸ್ 78ಕ್ಕೆ ಕುಸಿದಿದೆ. ಜೆಡಿಎಸ್ ಎಲ್ಲಿದೆಯೋ ಗೊತ್ತಿಲ್ಲ . ಹಾಗಾಗಿ ನಮಗೆ ಪೂರ್ಣ ಬಹುಮತವಿದ್ದು, ಅಧಿಕಾರ ಪೂರ್ಣಗೊಳಿಸುತ್ತೇವೆ ಎಂದರು. ಜೊತೆಗೆ, ಇಡೀ ದೇಶದಲ್ಲಿ ನರೇಂದ್ರ ಮೋದಿಯವರಿಗೆ ಸಂಪೂರ್ಣ ಬಹುಮತವಿದೆ ಆದರೂ ಕೂಡ ಅನೇಕ ಪಕ್ಷಗಳು ಮೋದಿಗೆ ಬೆಂಬಲ ಕೊಡುತ್ತೇವೆ ಎಂದು ಮುಂದೆ ಬರುತ್ತಿವೆ ಎಂದರು.