ತುಮಕೂರು: ಕೆಎಸ್ಆರ್ಟಿಸಿ ಬಸ್ಗೆ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲಿ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದ ಬಳಿ ನಡೆದಿದೆ.
ಭೀಕರ ಅಪಘಾತ: ಬಸ್ಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು - Tumakuru
ಕಾರು ಮತ್ತು ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾನೆ. ಈ ಕುರಿತು ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರನ್ನು ಶಿವಕುಮಾರ್ (27) ಮತ್ತು ಲೋಹಿತ್ಕುಮಾರ್ (26) ಎಂದು ಗುರುತಿಸಲಾಗಿದೆ. ಇಬ್ಬರೂ ಕಾರಿನಲ್ಲಿ ತುಮಕೂರಿಗೆ ಹೋಗುತ್ತಿದ್ದ ವೇಳೆ ಗುಬ್ಬಿ ತಾಲೂಕಿನ ದೊಡ್ಡಗುಣಿ ಕೆರೆ ಏರಿ ಮೇಲೆ ತುಮಕೂರು ಕಡೆಯಿಂದ ತುರುವೇಕೆರೆಗೆ ಹೋಗುತ್ತಿದ್ದ ಬಸ್ಗೆ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಲೋಹಿತ್ಕುಮಾರ್ ಅವರ ಪತ್ನಿ ಒಂದು ವಾರದ ಹಿಂದೆ ಮಗುವಿಗೆ ಜನ್ಮ ನೀಡಿದ್ದರು. ಹಾಗಾಗಿ ಲೋಹಿತ್ಕುಮಾರ್ ಅವರು ತಮ್ಮ ಮಗುವನ್ನು ನೋಡಲು ತುಮಕೂರಿಗೆ ಹೋಗುತ್ತಿದ್ದರು. ಶಿವಕುಮಾರ್ ಚಿಕ್ಕನಾಯಕನಹಳ್ಳಿ ಆಸ್ಪತ್ರೆಯಲ್ಲಿ 108 ಆಂಬ್ಯುಲೆನ್ಸ್ನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗ್ತಿದೆ. ವಾಹನಗಳೆರಡು ಸಂಪೂರ್ಣವಾಗಿ ಜಖಂಗೊಂಡಿವೆ.
TAGGED:
Tumakuru