ಕರ್ನಾಟಕ

karnataka

ETV Bharat / state

ಕುಣಿಗಲ್‌ ಶಾಲೆಯಲ್ಲಿ ಬಿಸಿಯೂಟ ಸೇವಿಸಿ ಮಕ್ಕಳು ಅಸ್ವಸ್ಥ; ಕಳಪೆ ಪಡಿತರ ಬಳಕೆ ಸಾಧ್ಯತೆ

ಶಾಲೆಯಲ್ಲಿ ನೀಡಲಾಗುವ ಬಿಸಿಯೂಟ ಸೇವಿಸಿದ ಮಕ್ಕಳು ಅಸ್ವಸ್ಥರಾದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಯಲಿಯೂರಿನಲ್ಲಿ ನಡೆದಿದೆ.

ಶಾಲೆಯ ಬಿಸಿ ಊಟ ಸೇವಿಸಿದ್ದ ಮಕ್ಕಳು ಅಸ್ವಸ್ಥ !

By

Published : Sep 20, 2019, 8:57 PM IST

ತುಮಕೂರು:ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಮಕ್ಕಳು ಅಸ್ವಸ್ಥರಾದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಯಲಿಯೂರಿನಲ್ಲಿ ನಡೆದಿದೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳು

ಗ್ರಾಮದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಊಟ ಸೇವಿಸಿದ ಏಳು ಮಕ್ಕಳಿಗೆ ಅನಾರೋಗ್ಯ ಉಂಟಾಗಿದೆ. ತಕ್ಷಣ ವಿದ್ಯಾರ್ಥಿಗಳನ್ನು ಕುಣಿಗಲ್ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆಯ ಬಳಿಕ ಎಲ್ಲ ವಿದ್ಯಾರ್ಥಿಗಳು ಗುಣಮುಖರಾಗಿದ್ದಾರೆ ಎಂದು ತಿಳಿದು ಬಂದಿದೆ.

ಮಧ್ಯಾಹ್ನದ ಬಿಸಿಯೂಟಕ್ಕೆ ಗೋದಿ ಮುದ್ದೆಯನ್ನು ಮಕ್ಕಳಿಗೆ ನೀಡಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಜೊತೆಗೆ ಆಹಾರ ತಯಾರಿಕೆಯಲ್ಲಿ ಕಳಪೆ ಗುಣಮಟ್ಟದ ಪಡಿತರ ಬಳಕೆ ಬಗ್ಗೆ ಅನುಮಾನ ಉಂಟಾಗಿದೆ.

ABOUT THE AUTHOR

...view details