ತುಮಕೂರು:ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಮೃತಪಟ್ಟಿರುವ ಘಟನೆ ಗುಬ್ಬಿ ತಾಲೂಕಿನ ಹೊಸಕೆರೆ ಗ್ರಾಮದಲ್ಲಿ ನಡೆದಿದೆ.
ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು - Tumakuru
ಕೋಳಿ ಫಾರಂ ಶೆಡ್ಗೆ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು
ಮೃತರನ್ನು ಜಾಕಿರ್ ಅಹಮದ್ (27) ಎಂದು ಗುರುತಿಸಲಾಗಿದೆ. ಗ್ರಾಮದ ಸೋಮಶೇಖರ್ ಎಂಬುವರಿಗೆ ಸೇರಿದ ಕೋಳಿ ಫಾರಂ ಶೆಡ್ಗೆ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಜಾಕಿರ್ ಅಹಮದ್ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.
ಜಾಕಿರ್ ತುಮಕೂರಿನ ಶಾಂತಿನಗರದ ನಿವಾಸಿ ಎಂದು ತಿಳಿದುಬಂದಿದೆ. ಈ ಕುರಿತು ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
TAGGED:
Tumakuru