ತುಮಕೂರು: ಲಾಕ್ಡೌನ್ ನಿಯಮಗಳನ್ನು ಪಾಲಿಸದವರಿಗೆ ಸರ್ಕಾರದ ಸೌಲಭ್ಯಗಳನ್ನು ಸ್ಥಗಿತಗೊಳಿಸಿ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮಾಜಿ ಸಚಿವ ಸೊಗಡು ಶಿವಣ್ಣ ಒತ್ತಾಯಿಸಿದರು. ಕೊರೊನಾ ನಿಯಂತ್ರಣಕ್ಕಾಗಿ ತೆರೆದಿರುವ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಮ್ಮ ಪಿಂಚಣಿ ಹಣವನ್ನು ನೀಡಲು ಸಿಎಂಗೆ ಪತ್ರ ಬರೆಯುತ್ತೇನೆ ಎಂದು ಅವರು ತಿಳಿಸಿದರು.
ನಿಯಮ ಪಾಲಿಸದವರಿಗೆ ಸರ್ಕಾರಿ ಸೌಲಭ್ಯ ನಿಲ್ಲಿಸಿ: ಸೊಗಡು ಶಿವಣ್ಣ - former minister shivanna
ಕೊರೊನಾ ಸೋಂಕು ತಡೆಗೆ ಸರ್ಕಾರ ವಿಧಿಸಿರುವ ನಿಯಮಗಳನ್ನು ಪಾಲಿಸದವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಸರ್ಕಾರಿ ಸೌಲಭ್ಯಗಳನ್ನು ಸ್ಥ ಗಿತಗೊಳಿಸಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಹೇಳಿದರು.
ಮಾಜಿ ಸಚಿವ ಶಿವಣ್ಣ
ಜಗತ್ತಿನಲ್ಲೆಡೆ ಕೊರೊನಾ ಸೋಂಕು ಹರಡುತ್ತಿದೆ. ಸೋಂಕು ನಿಯಂತ್ರಣಕ್ಕೆ ಸರ್ಕಾರ ಕೆಲವು ಖಡಕ್ ನಿಯಮಗಳನ್ನು ಜಾರಿ ಮಾಡಿದೆ. ಅಲ್ಪಸಂಖ್ಯಾತ ಸಮುದಾಯದ ಕೆಲವರು ಈ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಮಾಸ್ಕ್ ಧರಿಸದೆ ಎಲ್ಲೆಂದರಲ್ಲಿ ಸಂಚರಿಸುತ್ತಿದ್ದಾರೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಏಪ್ರಿಲ್ನಿಂದ ಕೊರೊನಾ ನಿಯಂತ್ರಣ ಆಗುವವರೆಗೂ ನನ್ನ ಪ್ರತಿ ತಿಂಗಳ 52,000 ಪಿಂಚಣಿಯನ್ನು ಬಳಸಿಕೊಳ್ಳಲು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರ ಬರೆಯುವುದಾಗಿ ತಿಳಿಸಿದರು.