ತುಮಕೂರು: ಪೊಲೀಸ್ ಠಾಣೆಗಳಿಗೆ ಬರುವ ಸಣ್ಣ - ಪುಟ್ಟ ಗಲಾಟೆ ಪ್ರಕರಣಗಳನ್ನು ತಕ್ಷಣ ಸ್ಥಳಕ್ಕೆ ತೆರಳಿ ಪರಿಹರಿಸುವ ಕೆಲಸ ತುಮಕೂರು ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಸದ್ದಿಲ್ಲದೇ ನಡೆಯುತ್ತಿದೆ. ಇಂತಹ ಪ್ರಕರಣಗಳನ್ನು ಆದಷ್ಟು ಬೇಗ ಬಗೆಹರಿಸುತ್ತಿರುವುದರಿಂದ ಪೊಲೀಸರ ಒತ್ತಡ ಕೂಡ ಕಡಿಮೆಯಾಗುತ್ತಿದೆ. ಈ ರೀತಿಯ ವ್ಯವಸ್ಥೆ ಜಿಲ್ಲೆಯಲ್ಲಿ ಜಾರಿಗೆ ಬಂದಿದೆ.
ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಮತ್ತು ಸಾರ್ವಜನಿಕರಿಗೆ ಪೊಲೀಸ್ ವ್ಯವಸ್ಥೆ ಜನಸ್ನೇಹಿಯಾಗಿಸುವ ದೃಷ್ಟಿಯಿಂದ, ಜಿಲ್ಲೆಗೆ ಹೊಸದಾಗಿ 'ಹೊಯ್ಸಳ' ವಾಹನಗಳು ಬಂದಿವೆ. ಹೊಯ್ಸಳ ಪಡೆಯ ಕಾರ್ಯದಕ್ಷತೆ ಬಗ್ಗೆ ಸಾರ್ವಜನಿಕರಲ್ಲಿ ನಂಬಿಕೆ ಹೆಚ್ಚುತ್ತಿದೆ. ಹೀಗಾಗಿ 112 ತುರ್ತು ಸ್ಪಂದನ ಸಹಾಯ ವ್ಯವಸ್ಥೆಯ ಮೂಲಕ ಪೊಲೀಸ್ ಇಲಾಖೆ ಜನರ ಸಣ್ಣಪುಟ್ಟ ಸಮಸ್ಯೆಗೆ ತಿಲಾಂಜಲಿ ಇಡುತ್ತಿದೆ. ಜಿಲ್ಲೆಯಲ್ಲಿ ಅಸ್ತಿತ್ವಕ್ಕೆ ಬಂದ 40 ದಿನಗಳಲ್ಲಿ 523 ದೂರುಗಳು ದಾಖಲಾಗಿದ್ದು, ಎಲ್ಲ ದೂರುಗಳನ್ನು ಸ್ವೀಕರಿಸಿ ಇತ್ಯರ್ಥಪಡಿಸಲಾಗಿದೆ. ತುಮಕೂರು ಜಿಲ್ಲೆಯಲ್ಲಿ 19 ಹೊಯ್ಸಳ ಪಡೆಯ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾರೆ.
ತುಮಕೂರು ತಾಲೂಕಿನಲ್ಲಿ ಐದು, ಕುಣಿಗಲ್, ತಿಪಟೂರು, ಶಿರಾ, ಪಾವಗಡ, ಮಧುಗಿರಿ ತಾಲೂಕಿನಲ್ಲಿ ತಲಾ ಎರಡು ವಾಹನಗಳು ನಿರಂತರ ಗಸ್ತು ತಿರುಗುತ್ತಿವೆ. ಚಿಕ್ಕನಾಯಕನಹಳ್ಳಿ, ತುರುವೇಕೆರೆ , ಗುಬ್ಬಿ ಕೊರಟಗೆರೆ, ತಾಲೂಕಿನಲ್ಲಿ ತಲಾ ಒಂದು ಹೊಯ್ಸಳ ವಾಹನಗಳು ಗಸ್ತು ತಿರುಗುತ್ತಿವೆ.
ಒಂದೇ ಭಾರತ ಒಂದೇ ತುರ್ತು ಕರೆ ಯೋಜನೆ ಜಾರಿಗೊಳಿಸಿದ ಕೇಂದ್ರ: