ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿಯೊಂದು ರಸ್ತೆ ಬದಿ ಕಂದಕಕ್ಕೆ ಉರುಳಿ ಬಿದ್ದ ಘಟನೆ ಜಿಲ್ಲೆಯ ಮಧುಗಿರಿ ತಾಲೂಕಿನ ಪುರವರ ಗ್ರಾಮದ ಬಳಿ ನಡೆದಿದೆ.
ತುಮಕೂರು: ಸಿಲಿಂಡರ್ ತುಂಬಿದ ಲಾರಿ ಪಲ್ಟಿ, ಚಾಲಕ ಪಾರು - Tumkur latest news 2020
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಪುರವರ ಗ್ರಾಮದ ಬಳಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಕಂದಕಕ್ಕೆ ಉರುಳಿ ಬಿದ್ದಿದೆ.
ಸಿಲಿಂಡರ್ ತುಂಬಿದ ಲಾರಿ ಪಲ್ಟಿ
ಅದೃಷ್ಟವಶಾತ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕುರುಬರ ಗ್ರಾಮದ ಜಯಮಂಗಲಿ ಸೇತುವೆ ಸಮೀಪ ಹೆಚ್ ಪಿ ಕಂಪನಿಯ ಗ್ಯಾಸ್ ಸಿಲಿಂಡರ್ ತುಂಬಿದ ಲಾರಿ ಹಿಂದುಪುರಕ್ಕೆ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದೆ. ಈ ಸಂಬಂಧ ಕೊಡಿಗೆನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.