ತುಮಕೂರು :ಜಿಲ್ಲೆಯಲ್ಲಿ ಇಂದು ಐವರು ಗರ್ಭಿಣಿಯರು ಸೇರಿದಂತೆ ಒಟ್ಟು 101 ಮಂದಿಯಲ್ಲಿ ಕೊರೊನಾ ಸೋಂಕು ದೃಢವಾಗಿದ್ದು, ಸೋಂಕಿತರ ಸಂಖ್ಯೆ 1718ಕ್ಕೆ ಏರಿಕೆಯಾಗಿದೆ.
ತುಮಕೂರು ಜಿಲ್ಲೆಯಲ್ಲಿ 1718ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ - Tumkur Corona News
ಇಂದು 80 ಮಂದಿ ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಈವರೆಗೂ ಒಟ್ಟು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರ ಸಂಖ್ಯೆ 831ಕ್ಕೆ ಏರಿಕೆ ಆಗಿದೆ..
ತುಮಕೂರು 40, ತಿಪಟೂರು 21, ಪಾವಗಡ ತಾಲೂಕಿನಲ್ಲಿ 8, ಗುಬ್ಬಿ ಮತ್ತು ಕೊರಟಗೆರೆ ತಾಲೂಕಿನಲ್ಲಿ ತಲಾ 7, ಕುಣಿಗಲ್ ಮತ್ತು ಚಿಕ್ಕನಾಯಕನಹಳ್ಳಿಯಲ್ಲಿ ತಲಾ 6, ತುವೇಕೆರೆ ತಾಲೂಕಿನ 4, ಮಧುಗಿರಿ ತಾಲೂಕಿನ ಇಬ್ಬರಿಗೆ ಸೋಂಕು ತಗುಲಿದೆ.
ಹಾಗೆಯೇ ಇಂದು 80 ಮಂದಿ ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಈವರೆಗೂ ಒಟ್ಟು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರ ಸಂಖ್ಯೆ 831ಕ್ಕೆ ಏರಿಕೆ ಆಗಿದೆ. ಇನ್ನೂ 833 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರು ಇಂದು ಸೋಂಕಿನಿಂದ ಬಲಿಯಾಗಿದ್ದು, ಜಿಲ್ಲೆಯಲ್ಲಿ ಮೃತರ ಸಂಖ್ಯೆ 54ಕ್ಕೆ ಏರಿಕೆಯಾಗಿದೆ.