ತುಮಕೂರು: ಕೋವಿಡ್-19ಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಶುಕ್ರವಾರ 9 ಮಂದಿಯನ್ನು ಆಸ್ಪತ್ರೆಯಲ್ಲಿ ಐಸೋಲೇಷನ್ನಲ್ಲಿಡಲಾಗಿದೆ. ಈ ಮೂಲಕ ಐಸೋಲೇಷನ್ಗೆ ಒಳಗಾದವರ ಸಂಖ್ಯೆ 150ಕ್ಕೆ ಏರಿಕೆಯಾಗಿದೆ.
ತುಮಕೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಐಸೋಲೇಷನ್ಗೆ ಒಳಗಾಗಿರೋರ ಸಂಖ್ಯೆ 150ಕ್ಕೆ ಏರಿಕೆ - isolation at a government hospital in Tumkur has risen to 150
ಕೊರೊನಾ ಸೋಂಕಿಗೆ ಸಂಬಂಧಿಸಿದಂತೆ ತುಮಕೂರು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಚಂದ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಜಿಲ್ಲೆಯಲ್ಲಿ ಐಸೋಲೇಷನ್ಗೆ ಒಳಗಾದವರ ಸಂಖ್ಯೆ 150ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದ್ರು.
ಕೊರೊನಾ ಸೋಂಕಿಗೆ ಸಂಬಂಧಿಸಿದಂತೆ ಹೇಳಿಕೆ ಬಿಡುಗಡೆ ಮಾಡಿರೋ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಚಂದ್ರಿಕಾ, ಈವರೆಗೆ 216 ಶಂಕಿತರ ರಕ್ತ ಮತ್ತು ಕಫವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಸ್ಯಾಂಪಲ್ಗಳ ವರದಿಯಲ್ಲಿ ನೆಗೆಟಿವ್ ಬಂದಿದೆ ಎಂದು ತಿಳಿಸಿದ್ದಾರೆ.
ಇದುವರೆಗೆ 480 ಮಂದಿಯ ಮೇಲೆ ನಿಗಾ ವಹಿಸಲಾಗಿದೆ. 148 ಮಂದಿ ಹೋಂ ಕ್ವಾರಂಟೈನ್ನಲ್ಲಿದ್ದಾರೆ. 222 ಮಂದಿಯು 28 ದಿನಗಳ ಹೋಂ ಕ್ವಾರಂಟೈನ್ ಪೂರ್ಣಗೊಳಿಸಿದ್ದಾರೆ. 222 ಮಂದಿಯ ಸ್ಯಾಂಪಲ್ಗಳನ್ನು ಟೆಸ್ಟ್ ಮಾಡಲಾಗಿತ್ತು. ಇದುವರೆಗೆ ಇಬ್ಬರು ವ್ಯಕ್ತಿಗಳಲ್ಲಿ ಪಾಸಿಟಿವ್ ಬಂದಿತ್ತು. ಅದ್ರಲ್ಲಿ ಸಿರಾ ಪಟ್ಟಣದ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ ಎಂದಿದ್ದಾರೆ.