ತುಮಕೂರು: ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟಿರುವ ಘಟನೆ ಜಿಲ್ಲೆಯ ತಿಪಟೂರು ನಗರದ ಮಾದಿಹಳ್ಳಿ ಗೇಟ್ ಬಳಿ ನಡೆದಿದೆ.
ಕಾರು ಡಿಕ್ಕಿ ಹೊಡೆದು ಪಾದಚಾರಿ ಸಾವು - ಮಾದಿಹಳ್ಳಿ ಗೇಟ್
ತಿಪಟೂರು ನಗರದ ಮಾದಿಹಳ್ಳಿ ಗೇಟ್ ಬಳಿ ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟಿದ್ದಾರೆ.
ಮಾದಿಹಳ್ಳಿ ಗೇಟ್ ಬಳಿ ಕಾರು ಡಿಕ್ಕಿ ಹೊಡೆದು ಪಾದಚಾರಿ ಸಾವು
ಮೃತ ವ್ಯಕ್ತಿ ಕುಂಟಹನುಮಯ್ಯ (65) ತಿಪಟೂರು ತಾಲೂಕು ಮಾದಿಹಳ್ಳಿ ನಿವಾಸಿ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಹೆಚ್ಚಿನ ಚಿಕಿತ್ಸೆಗಾಗಿ ತಿಪಟೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಈ ಸಂಬಂಧ ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.