ಕರ್ನಾಟಕ

karnataka

ETV Bharat / state

ಜಟಿಲಗೊಂಡ ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷರ ನೇಮಕ - ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷರ ನೇಮಕ ವಿಚಾರ

ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸೂಕ್ತವಾದ ಅಭ್ಯರ್ಥಿ ಆಯ್ಕೆ ಮಾಡುವ ವಿಚಾರ ಸಾಕಷ್ಟು ಸಮಸ್ಯೆಗಳಿಂದ ಕೂಡಿದೆ. ಅಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕ ಸುರೇಶ್ ಗೌಡರು ರಾಜೀನಾಮೆ ನೀಡಿ ಎರಡು ವಾರ ಕಳೆದರೂ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿಲ್ಲ.

Tumkur BJP office
ತುಮಕೂರು ಜಿಲ್ಲಾ ಬಿಜೆಪಿ ಕಾರ್ಯಾಲಯ

By

Published : Oct 14, 2021, 7:56 PM IST

ತುಮಕೂರು: ಇತ್ತೀಚೆಗಷ್ಟೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕ ಸುರೇಶ್ ಗೌಡ ರಾಜೀನಾಮೆ ನೀಡಿದ್ದು, ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪಕ್ಷದಲ್ಲಿ ಸಾಕಷ್ಟು ಜಟಿಲಗೊಂಡಿದೆ.

ಮುಂಬರುವ ವಿಧಾನಸಭಾ ಚುನಾವಣೆಯ ದೃಷ್ಟಿಯಿಂದ ಸೂಕ್ತ ಮುಖಂಡರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಬೇಕಿದೆ. ಆದರೆ, ಪ್ರಸ್ತುತ ಬಿಜೆಪಿ ವರಿಷ್ಠರಿಗೆ ತುಮಕೂರು ಜಿಲ್ಲಾಧ್ಯಕ್ಷ ಪಟ್ಟಕ್ಕೆ ಯಾರನ್ನೂ ನೇಮಕ ಮಾಡಬೇಕು ಎಂಬುದು ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಸುರೇಶ್ ಗೌಡ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಎರಡು ವಾರ ಕಳೆದ್ರೂ ಇನ್ನೂ ಆ ಸ್ಥಾನಕ್ಕೆ ಸೂಕ್ತ ಅಭ್ಯರ್ಥಿಗಾಗಿ ಬಿಜೆಪಿ ಹುಡುಕಾಟ ನಡೆಸುತ್ತಿದೆ. ಜಿಲ್ಲಾಧ್ಯಕ್ಷ ರೆಸ್​​​ನಲ್ಲಿರುವ ಶಾಸಕ ಜ್ಯೋತಿಗಣೇಶ್, ಹೆಬ್ಬಾಕ ರವಿ, ಗುಬ್ಬಿಯ ದಿಲೀಪ್ ಈ ಮೂವರನ್ನು ಬಿಟ್ಟು ಬೇರೊಬ್ಬ ಜಿಲ್ಲಾಧ್ಯಕ್ಷನನ್ನು ಹುಟ್ಟು ಹಾಕುತ್ತ ಎಂಬ ಚರ್ಚೆಗಳು ಸಹ ಕೇಳಿ ಬರುತ್ತಿವೆ.

ಗಣೇಶ್ ಭಾವಿಕಟ್ಟೆಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡಿದರೆ ಸೊಗಡು ಶಿವಣ್ಣ ಬಂಡಾಯ ಶಮನಗೊಳ್ಳುವ ಹಿನ್ನೆಲೆಯಲ್ಲಿ ಒಂದೆಡೆ ಪಕ್ಷದಲ್ಲಿ ಚರ್ಚೆ ಮುನ್ನೆಲೆಗೆ ಬಂದಿದೆ. ಈಗಾಗಲೇ ಸುರೇಶಗೌಡ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಮುಂದಿನ ಚುನಾವಣೆಯ ದೃಷ್ಟಿಯಿಂದ ಕ್ಷೇತ್ರದಲ್ಲಿ ತಮ್ಮ ಹಿಡಿತ ಸಾಧಿಸಲು ಪ್ಲಾನ್ ಮಾಡಿದ್ದಾರೆ. ಹೀಗಾಗಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಜೆಡಿಎಸ್ ಶಾಸಕ ಗೌರಿಶಂಕರ್ ವಿರುದ್ಧ ಸೆಣಸಲು ವೇದಿಕೆ ಸಿದ್ಧ ಮಾಡಿಕೊಂಡಿದ್ದಾರೆ.

ಅದೇ ರೀತಿ, ಬಿಜೆಪಿ ಮಾಜಿ ಶಾಸಕರು, ಮುಖಂಡರು, ಹಾಲಿ ಶಾಸಕರು ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಸಿದ್ಧತೆ ನಡೆಸುತ್ತಿದ್ದು, ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆಸಲು ಮುಂದಾಗುತ್ತಿಲ್ಲ. ತಾಲೂಕು ಮಟ್ಟದಲ್ಲಿರುವ ಬಿಜೆಪಿ ಮುಖಂಡರು ಜಿಲ್ಲಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲು ಕೂಡ ಮುಂದೆ ಬರುತ್ತಿಲ್ಲ. ಮುಖ್ಯವಾಗಿ ತುಮಕೂರು ಜಿಲ್ಲಾ ಕೇಂದ್ರದಲ್ಲಿಯೇ ಇದ್ದು ಸಮರ್ಥವಾಗಿ ಸಂಘಟನೆ ಮಾಡುವ ಮೂಲಕ ಜಿಲ್ಲಾಧ್ಯಕ್ಷ ಸ್ಥಾನವನ್ನು ನಿರ್ವಹಿಸಲು ಸಾಧ್ಯವಾಗುವುದಿಲ್ಲ.

ಹೀಗಾಗಿ ತುಮಕೂರು ಜಿಲ್ಲಾ ಕೇಂದ್ರದಲ್ಲಿಯೇ ಇರುವಂತಹ ಬಿಜೆಪಿ ಸಮರ್ಥ ಮುಖಂಡರನ್ನು ಹುಡುಕಿ ಪಕ್ಷದಲ್ಲಿನ ಬಂಡಾಯ ಶಮನಗೊಳಿಸಿ ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುವಂತಹ ಮುಖಂಡರು ಬೇಕು ಎಂಬ ಆಶಯವನ್ನು ಪಕ್ಷ ಹೊಂದಿದೆ. ಸಮರ್ಥ ಬಿಜೆಪಿ ಜಿಲ್ಲಾಧ್ಯಕ್ಷರ ಹುಡುಕಾಟದಲ್ಲಿ ತೊಡಗಿದೆ.

ಇದನ್ನೂ ಓದಿ: ರಾಜ್ಯದಲ್ಲಿಂದು 310 ಮಂದಿಗೆ ಸೋಂಕು ದೃಢ: 06 ಜನ ಸಾವು

ABOUT THE AUTHOR

...view details