ತುಮಕೂರು: ಸುಪ್ರೀಂಕೋರ್ಟ್ ಆದೇಶದ ಮೇಲೆ ಅನರ್ಹ ಶಾಸಕರ ಭವಿಷ್ಯ ನಿಂತಿದೆ ಎಂದು ತುಮಕೂರು ಸಂಸದ ಜಿ.ಎಸ್.ಬಸವರಾಜು ತಿಳಿಸಿದ್ದಾರೆ.
ಸುಪ್ರೀಂಕೋರ್ಟ್ ಆದೇಶದ ಮೇಲೆ ಅನರ್ಹ ಶಾಸಕರ ಭವಿಷ್ಯವಿದೆ: ಜಿ.ಎಸ್.ಬಸವರಾಜು - tumkur news
ಸುಪ್ರೀಂಕೋರ್ಟ್ ಆದೇಶದ ಮೇಲೆ ಅನರ್ಹ ಶಾಸಕರ ಭವಿಷ್ಯವಿದೆ ಎಂದು ತುಮಕೂರಿನ ಸಂಸದ ಜಿ.ಎಸ್.ಬಸವರಾಜು ತಿಳಿಸಿದ್ದಾರೆ.
ರಾಜ್ಯದಲ್ಲಿ ಉಪಚುನಾವಣೆ ದಿನಾಂಕ ನಿಗದಿಯಾದ ಹಿನ್ನೆಲೆಯಲ್ಲಿ, ಅನರ್ಹ ಶಾಸಕರ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಿ.ಎಸ್.ಬಸವರಾಜು, ಚುನಾವಣೆಗೆ ಇನ್ನೂ ಒಂದು ತಿಂಗಳ ಕಾಲಾವಕಾಶವಿದೆ. ಕೋರ್ಟ್ ವಿಚಾರದ ಬಗ್ಗೆ ಮಾತನಾಡಲಾಗುವುದಿಲ್ಲ. ಸುಪ್ರೀಂಕೋರ್ಟ್ ಆದೇಶದ ಮೇಲೆ ಅನರ್ಹ ಶಾಸಕರ ಭವಿಷ್ಯವಿದೆ, ನೋಡೋಣ ಇನ್ನೂ ಕಾಲಾವಕಾಶವಿದೆ ಎಂದರು.
ಸಂಸದ ತೇಜಸ್ವಿ ಸೂರ್ಯ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಂಸದರು, ಅವರು ಬೆಂಗಳೂರಿನಲ್ಲಿ ಇದ್ದುಕೊಂಡು ಹಾಗೆ ಹೇಳಿದ್ದಾರೆ, ನಮ್ಮ ಸರ್ಕಾರದಲ್ಲಿ ಐದೂವರೆ ಸಾವಿರ ಕೋಟಿ ರೂ ಹಣವಿದೆ, ಮಳೆಗಾಲ ಮುಗಿದ ನಂತರ ಕೇಂದ್ರ ಸರ್ಕಾರದಿಂದ ಉತ್ತರ ಕರ್ನಾಟಕದ ನೆರೆ ಪ್ರವಾಹಕ್ಕೆ ಒಳಗಾದವರಿಗೆ ಮನೆ ಕಟ್ಟಲು ಹಣ ಬಿಡುಗಡೆ ಮಾಡಲಾಗುವುದು ಎಂದರು.