ತುಮಕೂರು:ಸಚಿವ ಜೆ.ಸಿ.ಮಾಧುಸ್ವಾಮಿ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಇದುವರೆಗೆ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅಲ್ಲದೆ ಒಂದು ಬಾರಿ ಕೆಎಂಎಫ್ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಬಿಜೆಪಿ ಪಕ್ಷದಿಂದ ಚುನಾಯಿತರಾಗಿದ್ದಾರೆ.
ಬಿಜೆಪಿಯಿಂದ ಮೊದಲ ಬಾರಿ ಗೆದ್ದು ಸಚಿವರಾದ ಮಾಧುಸ್ವಾಮಿ
ಸಚಿವ ಜೆ.ಸಿ.ಮಾಧುಸ್ವಾಮಿ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಇದುವರೆಗೆ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅಲ್ಲದೆ ಒಂದು ಬಾರಿ ಕೆಎಂಎಫ್ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಬಿಜೆಪಿ ಪಕ್ಷದಿಂದ ಚುನಾಯಿತರಾಗಿದ್ದಾರೆ.
ಈ ಹಿಂದೆ ಜನತಾದಳ, ಜೆಡಿಯುನಿಂದ ಮತ್ತು ಪಕ್ಷೇತರ ಶಾಸಕರಾಗಿ ತಲಾ ಒಂದು ಬಾರಿ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದ್ದರು. 1954ರ ಆಗಸ್ಟ್ 5ರಂದು ಮಾಧುಸ್ವಾಮಿ ಜನಿಸಿದರು. ತಂದೆ ಚಂದ್ರಶೇಖರಯ್ಯ, ಮೂಲತಃ ರೈತಾಪಿ ಕುಟುಂಬದವರಾಗಿದ್ದಾರೆ. ಬಿಎಸ್ಸಿ, ಎಂಎ, ಎಲ್.ಎಲ್.ಬಿ ವ್ಯಾಸಂಗ ಮಾಡಿರುವ ಮಾಧುಸ್ವಾಮಿ, ಕೆಲಕಾಲ ವಕೀಲರಾಗಿ ಕೆಲಸ ಮಾಡಿದ್ದಾರೆ.
1989ರಲ್ಲಿ ಜನತಾದಳದಿಂದ ಸ್ಪರ್ಧಿಸಿ 26291 ಮತಗಳಿಂದ ಗೆಲುವು ಸಾಧಿಸಿ, 1997ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ 33768 ಮತಗಳಿಂದ ಜಯಭೇರಿ ಭಾರಿಸಿದ್ದರು. 2004ರಲ್ಲಿ ಜೆಡಿಯು ಪಕ್ಷದಿಂದ ಸ್ಪರ್ಧಿಸಿ 43040 ಮತಗಳಿಂದ ಗೆದ್ದಿದ್ದರು. 2018ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ 69,612 ಮತಗಳಿಂದ ಜಯಶಾಲಿಯಾಗಿದ್ದಾರೆ.