ತುಮಕೂರು:ನಗರದಲ್ಲಿ ಮನೆಗಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಚಿಕ್ಕನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರಿಂದ 4.17 ಲಕ್ಷ ರೂಪಾಯಿ ಮೌಲ್ಯದ 87 ಗ್ರಾಂ ಚಿನ್ನಾಭರಣ ಹಾಗೂ 107 ಗ್ರಾಂ ಬೆಳ್ಳಿಯ ಸಾಮಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ.

ಕುಮಾರ, ಕುಮಟಿ, ಮಂಜ ಬಂಧಿತ ಆರೋಪಿಗಳಾಗಿದ್ದಾರೆ. ಆಗಸ್ಟ್ 10ರಂದು ಚಿಕ್ಕನಾಯಕನಹಳ್ಳಿ ತಾಲೂಕು ಹೊನ್ನೇಬಾಗಿ ಗ್ರಾಮದಲ್ಲಿ ರತ್ನಮ್ಮ ಎಂಬುವರ ಮನೆಗೆ ನುಗ್ಗಿ ಕಳ್ಳತನ ಮಾಡಿದ್ದರು. ಈ ಸಂಬಂಧ ಚಿಕ್ಕನಾಯಕನಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ವಿಚಾರಣೆ ವೇಳೆ ಇವರು ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂರು ಪ್ರಕರಣ ಮತ್ತು ತಿಪಟೂರು ತಾಲೂಕಿನ ವ್ಯಾಪ್ತಿಯ ಒಂದು ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಒಪ್ಪಿಕೊಂಡಿದ್ದಾರೆ.