ತುಮಕೂರು:ಖಾಸಗಿ ಬಸ್ ಹಾಗು ಓಮ್ನಿ ವ್ಯಾನ್ ನಡುವೆ ನಡೆದ ಭೀಕರ ಅಪಘಾತ ಸಂಭವಿಸಿ ಮೂವರು ಸಜೀವ ದಹನಗೊಂಡಿರುವ ದುರ್ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 206ರ ದೊಡ್ಡಗುಣಿ ಗ್ರಾಮದ ಬಳಿ ನಡೆದಿದೆ.
ಇಂದು ಮುಂಜಾನೆ ಈ ಅಪಘಾತ ಸಂಭವಿಸಿದ್ದು ಮಾರುತಿ ಓಮ್ನಿ ವ್ಯಾನ್ನಲ್ಲಿದ್ದ ವಸಂತಕುಮಾರ್ (55) ಮತ್ತು ರಾಮಯ್ಯ(55),ನರಸಮ್ಮ (65) ಎಂಬುವರು ಸಜೀವ ದಹನಗೊಂಡಿದ್ದಾರೆ. ಇನ್ನು ವ್ಯಾನ್ನಲ್ಲಿದ್ದ ಮೂವರು ಗಂಭೀರ ವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಶ್ರೀಶ ಟ್ರಾವೆಲ್ಸ್‌ಗೇ ಸೇರಿದ ಖಾಸಗಿ ಬಸ್ ಹಾಗೂ ಎನ್ ಹೊಸಹಳ್ಳಿ ಗ್ರಾಮದಿಂದ ನಿಟ್ಟೂರಿಗೆ ಹೋಗುತ್ತಿದ್ದ ಮಾರುತಿ ವ್ಯಾನ್ ನಡುವೆ ಅಪಘಾತ ಸಂಭವಿಸಿದೆ.