ತುಮಕೂರು: ಅಪರಿಚಿತ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನಲ್ಲಿ ನಡೆದಿದೆ.
ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ..ಇಬ್ಬರು ಮಕ್ಕಳು ಸೇರಿ ಮೂವರ ದುರ್ಮರಣ - ತುಮಕೂರು ಕಾರು ಅಪಘಾತ
ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪರಿಚಿತ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿ ಮೂವರು ಸಾವನ್ನಪ್ಪಿದ್ದಾರೆ.
road accident
ಅವಿನಾಶ್ (28), ಪ್ರಣತಿ (4), ಸೌಖ್ಯ (5) ಮೃತರು. ಶಿರಾ ತಾಲೂಕಿನ ತರೂರು ಗೇಟ್ ಬಳಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಅವಿನಾಶ್ ಹಾಗೂ ಪ್ರಣತಿ ಮೃತಪಟ್ಟಿದ್ದಾರೆ. ಸೌಖ್ಯಳನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾಳೆ. ಈ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಅಥಣಿಯಲ್ಲಿ ಕಾಲೇಜು ಬಸ್, ಕ್ಯಾಂಟರ್ ಮಧ್ಯೆ ಡಿಕ್ಕಿ.. ಚಾಲಕರಿಬ್ಬರೂ ಸಾವು, ಹಲವು ವಿದ್ಯಾರ್ಥಿಗಳ ಸ್ಥಿತಿ ಗಂಭೀರ