ಕರ್ನಾಟಕ

karnataka

ETV Bharat / state

ತುಮಕೂರು: ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ - ತುಮಕೂರಿನ ಪಂಡಿತನಹಳ್ಳಿ ರೈಲ್ವೆ ಹಳಿ

A family committed suicide in Tumkur: ಸಾಲಬಾಧೆ ತಾಳಲಾರದೆ ತುಮಕೂರಿನ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆ
ಆತ್ಮಹತ್ಯೆ

By ETV Bharat Karnataka Team

Published : Oct 2, 2023, 1:08 PM IST

ತುಮಕೂರು:ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಮೂವರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನ ಪಂಡಿತನಹಳ್ಳಿ ರೈಲ್ವೆ ಹಳಿ ಬಳಿ ನಡೆದಿದೆ. ತಂದೆ, ತಾಯಿ, ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿದ್ದಗಂಗಯ್ಯ (62), ಸುನಂದಮ್ಮ, ಗೀತಾ ಆತ್ಮಹತ್ಯೆಗೆ ಶರಣಾದವರು.

ತುಮಕೂರಿನ ಮರಳೂರು ನಿವಾಸಿಯಾಗಿದ್ದ ಸಿದ್ದಗಂಗಯ್ಯ, ಕಳೆದ ಎರಡು ವರ್ಷಗಳ ಹಿಂದೆ ಕೆಇಬಿಯಿಂದ ನಿವೃತ್ತಿ ಹೊಂದಿದ್ದರು. ಸಾಕಷ್ಟು ಸಾಲ ಮಾಡಿಕೊಂಡಿದ್ದ ಸಿದ್ದಗಂಗಯ್ಯ, ಬೆಂಗಳೂರಿನ ಮಲ್ಲೇಶ್ವರಂ ಬಳಿಯಿರುವ ಕೆಸಿ ಜನರಲ್ ಆಸ್ಪತ್ರೆ ಬಳಿ ಟೀ ಶಾಪ್​ ಇಟ್ಟುಕೊಂಡಿದ್ದರು. ಇಂದು ಬೆಳಗಿನ ಜಾವ ಆಟೋದಲ್ಲಿ ಬಂದು ಪಂಡಿತನಹಳ್ಳಿ ರೈಲ್ವೆ ಹಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹಗಳು ಚೆಲ್ಲಾಪಿಲ್ಲಿಯಾಗಿವೆ.

ತುಮಕೂರು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಮೃತದೇಹಗಳು ರವಾನೆ ಮಾಡಲಾಗಿದ್ದು, ಯಶವಂತಪುರ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ಮಂಗಳೂರಿನ ಪ್ರಖ್ಯಾತ ಖಾಸಗಿ ಬಸ್​ ಮಾಲೀಕ ಆತ್ಮಹತ್ಯೆ: ನಗರದ ಕದ್ರಿ ಕಂಬಳದಲ್ಲಿ ಬಸ್ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ನಡೆದಿತ್ತು. ಮಹೇಶ್ ಮೋಟಾರ್ಸ್ ಬಸ್ ಮಾಲೀಕ ಪ್ರಕಾಶ್ ಶೇಖ (45) ಆತ್ಮಹತ್ಯೆಗೆ ಶರಣಾದವರು. ಕದ್ರಿ ಕಂಬಳದಲ್ಲಿರುವ ಅಪಾರ್ಟ್​ಮೆಂಟ್​ನಲ್ಲಿ ವಾಸವಾಗಿದ್ದ ಇವರು ತಮ್ಮ ನಿವಾಸದಲ್ಲಿ ಸಾವಿಗೆ ಶರಣಾಗಿದ್ದಾರೆ. ಮೂಲತಃ ಮಂಗಳೂರಿನ ಕುಲಶೇಖರ ನಿವಾಸಿಯಾಗಿರುವ ಪ್ರಕಾಶ್ ಶೇಖ ಅವರು ಪತ್ನಿ ಹಾಗೂ ಪುತ್ರಿಯೊಂದಿಗೆ ವಾಸವಿದ್ದರು. ಭಾನುವಾರ ಬೆಳಗ್ಗೆ ಅವರು ಸ್ವಲ್ಪಹೊತ್ತು ಮಲಗುತ್ತೇನೆಂದು ತಮ್ಮ ಕೋಣೆಗೆ ಹೋಗಿದ್ದರು‌. ಆದರೆ ಮಧ್ಯಾಹ್ನ ಊಟಕ್ಕೆ ಏಳದಿರುವುದನ್ನು ಕಂಡು ಮನೆಯವರು ಬಾಗಿಲು ಬಡಿದಾಗ ಬಾಗಿಲು ತೆರೆದಿರಲಿಲ್ಲ. ಆ ಬಳಿಕ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿದ್ದು ಗೊತ್ತಾಗಿತ್ತು. ಈ ಬಗ್ಗೆ ಅವರ ಪತ್ನಿ ಕದ್ರಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಡೆತ್‌ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ:ಪೊಲೀಸರು ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಡೆತ್‌ನೋಟ್​ ಬರೆದಿಟ್ಟು ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದಿತ್ತು. ತಲಘಟ್ಟಪುರದ ನಾಗರಾಜ್ (47) ಮೃತರು. ಘಟನಾ ಸ್ಥಳಕ್ಕೆ ತಲಘಟ್ಟಪುರ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದರು. ಖಾಸಗಿ ಕಂಪನಿಯಲ್ಲಿ ನಾಗರಾಜ್ ಕೆಲಸ ಮಾಡುತ್ತಿದ್ದ. ಕಂಪನಿಯ ಹೆಸರಿನಲ್ಲಿ ಹಣ ಪಡೆದು ವಂಚಿಸಿರುವುದಾಗಿ ನಟರಾಜ್ ಎಂಬವರು ವೈಯಾಲಿಕಾವಲ್ ಠಾಣೆಗೆ ಇತ್ತೀಚೆಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಪೊಲೀಸರು ತನಿಖೆ ನಡೆಸಿದ್ದರು.​

ಇದನ್ನೂ ಓದಿ:ಮಂಗಳೂರಿನಲ್ಲಿ ಬಸ್ ಉದ್ಯಮಿ ಆತ್ಮಹತ್ಯೆ

ABOUT THE AUTHOR

...view details