ಕರ್ನಾಟಕ

karnataka

ETV Bharat / state

ತುಮಕೂರಲ್ಲಿ ಭಾರಿ ಮಳೆ: ಹಳ್ಳದಲ್ಲಿ ಕೊಚ್ಚಿ ಹೋದ ಮೂವರು, ಓರ್ವನ ಶವ ಪತ್ತೆ! - ಹಳ್ಳದಲ್ಲಿ ಕೊಚ್ಚಿ ಹೋದ ಮೂವರು

ತುಮಕೂರಿನಲ್ಲಿ ಮಳೆಯಾರ್ಭಟ ಮುಂದುವರೆದಿದೆ. ಜಿಲ್ಲೆಯಲ್ಲಿ ವಿವಿಧೆಡೆ ಮೂವರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಸದ್ಯ ಓರ್ವನ ಶವ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

Rain related incidents in Tumkur
ತುಮಕೂರು

By

Published : Oct 18, 2022, 9:08 AM IST

ತುಮಕೂರು:ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಬಹುತೇಕ ಎಲ್ಲಾ ಹಳ್ಳಗಳು ತುಂಬಿ ಹರಿಯುತ್ತಿವೆ. ಈ ನಡುವೆ ಜಿಲ್ಲೆಯ ವಿವಿಧೆಡೆ ಮೂವರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಸದ್ಯ ಓರ್ವನ ಶವ ಪತ್ತೆಯಾಗಿದ್ದು, ಇನ್ನೂ ಇಬ್ಬರ ಶವ ಪತ್ತೆಯಾಗಿಲ್ಲ.

ನಟರಾಜು -ಮೃತ ದೇಹ

ತುರುವೇಕೆರೆ ತಾಲೂಕಿನ ಕಲ್ಲೂರು ಗ್ರಾಮದ ಕೆರೆ ಕೋಡಿ ನೀರಿನಲ್ಲಿ ಇಬ್ಬರು ಕೊಚ್ಚಿ ಹೋಗಿದ್ದರು. ಒಂದು ದಿನದ ನಂತರ ಓರ್ವ ವ್ಯಕ್ತಿಯ ಶವ ಪತ್ತೆಯಾಗಿದೆ. ಮೃತನನ್ನು ಕಲ್ಲೂರು ಗ್ರಾಮದ ನಟರಾಜು (39) ಎಂದು ಗುರುತಿಸಲಾಗಿದೆ. ಇನ್ನೊಬ್ಬನ ಶವ ಪತ್ತೆಯಾಗಬೇಕಿದ್ದು, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯದಲ್ಲಿ ನಿರತರಾಗಿದ್ದಾರೆ. ಈ ಸಂಬಂಧ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಗ್ರಾಮದ ಬಳಿ ಪಲ್ಲವರಾಯನ ಕೆರೆ ಕೋಡಿ ನೀರಿನಲ್ಲಿ ವ್ಯಕ್ತಿಯೊಬ್ಬರು ಕೊಚ್ಚಿ ಹೋಗಿದ್ದಾರೆ. ಕೆಂಚಗನಹಳ್ಳಿ ಗ್ರಾಮದ ಗಂಗಾಧರ್ (38) ಹಳ್ಳದ ನೀರಿನಲ್ಲಿ ಕಣ್ಮರೆಯಾಗಿದ್ದು, ಇನ್ನೂ ಪತ್ತೆಯಾಗಿಲ್ಲ. ಈ ಸಂಬಂಧ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ತುಮಕೂರಲ್ಲಿ ಭಾರಿ ಮಳೆ: ಪಾವಗಡ ಸೋಲಾರ್ ಪಾರ್ಕ್​ ಮುಳುಗಡೆ

ABOUT THE AUTHOR

...view details