ಕರ್ನಾಟಕ

karnataka

ETV Bharat / state

ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಡಿಕ್ಕಿ : ಮೂವರು ಮಹಿಳೆಯರು ಸಾವು, ಮಗು ಗಂಭೀರ

ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟ ಘಟನೆ ತುಮಕೂರಿನಲ್ಲಿ ನಡೆದಿದೆ..

three-killed-in-road-accident-near-tumakuru
ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಮಹಿಳೆಯವರು ಸಾವು, ಮಗು ಗಂಭೀರ

By

Published : Apr 10, 2022, 5:02 PM IST

ತುಮಕೂರು :ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಅತಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು, ಮಗುವೊಂದು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ನಗರದ ಕಟ್ಟಿಗೇನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತರನ್ನು ಬೆಂಗಳೂರಿನ ಅನ್ನಪೂರ್ಣ (55), ಅದಿತಿ (32) ಹಾಗೂ ಆರತಿ (28) ಎಂದು ಗುರುತಿಸಲಾಗಿದೆ.

ಕಾರಿನಲ್ಲಿದ್ದವರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು, ಮತ್ತೊಬ್ಬರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಅಸುನೀಗಿದ್ದಾರೆ. ಗಾಯಗೊಂಡಿರುವ ಮಗುವಿನ ಸ್ಥಿತಿ ಚಿಂತಾಜನಕವಾಗಿದ್ದು, ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.

ಅಪಘಾತದಲ್ಲಿ ನುಜ್ಜುಗುಜ್ಜಾದ ಕಾರು

ಬೆಂಗಳೂರು ಕಡೆಯಿಂದ ಸಿರಾ ಕಡೆಗೆ ತೆರಳುತ್ತಿದ್ದ ಕಾರು ಕಟ್ಟಿಗೇನಹಳ್ಳಿ ಬಳಿ ರಸ್ತೆ ಬದಿಯಲ್ಲಿ ಲಾರಿ ಕೆಟ್ಟು ನಿಂತಿದ್ದ ಲಾರಿಗೆ ಗುದ್ದಿದೆ. ಪುಣೆ ಕಡೆಗೆ ತೆರಳುತ್ತಿದ್ದ ಲಾರಿ ನಿಂತಿರುವುದನ್ನು ಗಮನಿಸದ ಕಾರು ಚಾಲಕ ಹಿಂಭಾಗಕ್ಕೆ ಡಿಕ್ಕಿ ಹೊಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಕೋರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬೆಂಗಳೂರು : ತಮಟೆ ಬಡಿಯೋದು ನಿಲ್ಲಿಸಿದ್ದಕ್ಕೆ ಮಚ್ಚಿನೇಟು!

ABOUT THE AUTHOR

...view details