ತುಮಕೂರು: ಜಿಲ್ಲೆಯ ತಿಪಟೂರು ತಾಲೂಕಿನ ಕೋಡಿಹಳ್ಳಿ ಕಾವಲಿನಲ್ಲಿ ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿದ್ದಾನೆ.
ತುಮಕೂರಿನಲ್ಲಿ ಸಿಡಿಲು ಬಡಿದು ರೈತ ಸಾವು
ತಿಪಟೂರು ತಾಲೂಕಿನಲ್ಲಿ ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿದ್ದಾನೆ. ಕೋಡಿಹಳ್ಳಿ ಕಾವಲಿನ ನಳಿನಾಕ್ಷ (50) ಮೃತ ರೈತ.
ತಾಲೂಕಿನ ಕೋಡಿಹಳ್ಳಿ ಕಾವಲಿನ ನಳಿನಾಕ್ಷ (50) ಮೃತ ರೈತ. ಸಂಜೆ 6 ಗಂಟೆ ಸಮಯದಲ್ಲಿ ಭಾರಿ ಮಳೆ ಸುರಿದಿದೆ. ಈ ವೇಳೆ ತೋಟದಲ್ಲಿದ್ದ ಹಸುಗಳನ್ನು ಕೊಟ್ಟಿಗೆಯಲ್ಲಿ ಕಟ್ಟಲು ತೆರಳಿದ ವೇಳೆ ಸಿಡಿಲು ಬಡಿದು ರೈತ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಇನ್ನು ಜಿಲ್ಲೆಯ ಮಧುಗಿರಿ, ಕೊರಟಗೆರೆ, ತಿಪಟೂರು, ಚಿಕ್ಕನಾಯಕನಹಳ್ಳಿ, ತುಮಕೂರು, ಗುಬ್ಬಿ, ತುರುವೇಕೆರೆ ತಾಲೂಕಿನಲ್ಲಿ ಉತ್ತಮ ಮಳೆಯಾಗಿದೆ. ನಿರಂತರವಾಗಿ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಯಿಂದ ಕೆಲ ಕಾಲ ಜನಜೀವನ ಅಸ್ತವ್ಯಸ್ತವಾಗಿತ್ತು. ಈಗಾಗಲೇ ಅನೇಕ ದಿನಗಳಿಂದ ಉತ್ತಮ ಮಳೆಯಾಗಿದ್ದು, ರಾಗಿ, ನೆಲಗಡಲೆ, ಮೆಕ್ಕೆಜೋಳ ಬಿತ್ತನೆ ಮಾಡಲಾಗಿದೆ.