ತುಮಕೂರು:ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಶೇ. 82.31ರಷ್ಟು ಮುಕ್ತ ಹಾಗೂ ಶಾಂತಿಯುತ ಮತದಾನವಾಗಿದೆ. ಎಲ್ಲಾ ಇವಿಎಂಗಳನ್ನು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇರಿಸಲಾಗಿದ್ದು, ಭಾರಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಶಿರಾ ಉಪ ಕದನ: ಇವಿಎಂಗಳಿಗೆ ಬಿಗಿ ಭದ್ರತೆ - tight security for EVM
ಶಿರಾದಲ್ಲಿ ಉಪ ಚುನಾವಣೆ ಮುಗಿದ ಬಳಿಕ ಎಲ್ಲಾ ಇವಿಎಂಗಳನ್ನು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇರಿಸಲಾಗಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು
ನವೆಂಬರ್ 10ರಂದು ಮತ ಎಣಿಕೆ ನಡೆಯಲಿದ್ದು, ಇವಿಎಂಗಳನ್ನು ಸುರಕ್ಷಿತವಾಗಿ ಇರಿಸಲು ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಲ್ಲದೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.