ತುಮಕೂರು: ನಗರದ ಹೊರವಲಯದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಜಿಲ್ಲಾ ಪೊಲೀಸ್ ಇಲಾಖೆ 22 ಅಪಘಾತ ವಲಯಗಳನ್ನು (ಬ್ಲಾಕ್ ಸ್ಪಾಟ್ಗಳನ್ನು) ಗುರುತಿಸಿದೆ. ಇನ್ನೊಂದೆಡೆ ಈಗಾಗಲೇ ಸಾವಿರಾರು ಗುಂಡಿಗಳು ಇದ್ದು, ಅಪಘಾತಗಳು ದಿನೇ ದಿನೇ ಹೆಚ್ಚಾಗತೊಡಗಿವೆ.
ತುಮಕೂರಿನ ಕ್ಯಾತ್ಸಂದ್ರ ಗಡಿಯಿಂದ ಚಿತ್ರದುರ್ಗ ಜಿಲ್ಲೆಯ ತಾವರೆಕೆರೆಯವರಿಗೂ ರಾಷ್ಟ್ರೀಯ ಹೆದ್ದಾರಿ 48 ಹಾದು ಹೋಗಿದೆ. ಇಲ್ಲಿ ನಿತ್ಯ ಸಾವಿರಾರು ಲಘು ಹಾಗೂ ಭಾರಿ ವಾಹನಗಳು ಸಂಚರಿಸುತ್ತವೆ. ನಿತ್ಯ ಕನಿಷ್ಠ 2 ರಿಂದ 3 ಅಪಘಾತಗಳು ಸಂಭವಿಸುತ್ತಿವೆ. ಒಟ್ಟು ಒಂಬತ್ತು ಮಂದಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವುದು ಗಮಿನಿಸಬೇಕಾದ ಅಂಶವಾಗಿದೆ.
ರಾಷ್ಟ್ರೀಯ ಹೆದ್ದಾರಿ 48ರಲ್ಲಿ 22 ಬ್ಲಾಕ್ ಸ್ಪಾಟ್ಗಳು ಹೀಗಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅದರಲ್ಲೂ ಮುಖ್ಯವಾಗಿ ರಾತ್ರಿ ವೇಳೆ ಅಪಘಾತಗಳು ಸಂಭವಿಸುತ್ತಿವೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ಹೇಳಿದೆ. ಅಲ್ಲದೇ ಇದನ್ನು ತಡೆಗಟ್ಟಲು ಹರಸಾಹಸ ಪಡುತ್ತಿದೆ. ಮೂರು ಪಥದ ರಸ್ತೆಯಲ್ಲಿ ಭಾರಿ ವಾಹನಗಳಾದ ಲಾರಿಗಳಿಗೆ ಇನ್ನರ್ ಲೇನ್ನಲ್ಲಿ ಬರಬಾರದೆಂದು ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಇದನ್ನೂ ಓದಿ: ಸಾವಿಗೆ ರಹದಾರಿಯಾದ ರಾಷ್ಟ್ರೀಯ ಹೆದ್ದಾರಿ 48: ತುಮಕೂರು ರಸ್ತೆಯಲ್ಲಿ ಸಾವಿರಾರು ಗುಂಡಿಗಳು
ವೇಗವಾಗಿ ಸಂಚರಿಸಲು ಅವಕಾಶವಿರುವ ಲೇನ್ಗೆ ಬಾರಿ ವಾಹನಗಳು ಬಾರದಂತೆ ನಿತ್ಯ ಪೊಲೀಸರು ಪೆಟ್ರೋಲಿಂಗ್ ಮಾಡುತ್ತಿದ್ದಾರೆ. ಅಲ್ಲದೇ ಅಪಘಾತ ವಲಯ ಬ್ಲಾಕ್ ಸ್ಪಾಟ್ ಗಳೆಂದು ಗುರುತಿಸಿರುವ ಸ್ಥಳಗಳಲ್ಲಿ ವಾಹನಗಳ ವೇಗದ ಮಿತಿಗೆ ಕಡಿವಾಣ ಹಾಕಲಾಗುತ್ತಿದೆ. ಈ ಮೂಲಕ ರಸ್ತೆ ಅಪಘಾತಗಳ ಸಂಖ್ಯೆ ಕ್ಷೀಣಿಸಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.