ಕರ್ನಾಟಕ

karnataka

ETV Bharat / state

ತುಮಕೂರು: ಜಂಟಿ ರೋಡ್ ಶೋ ನಡೆಸಿ ಬಿಜೆಪಿ ಹುರಿಯಾಳುಗಳಿಂದ ನಾಮಪತ್ರ ಸಲ್ಲಿಕೆ - ತುಮಕೂರು

ತುಮಕೂರು ನಗರ ಬಿಜೆಪಿ ಅಭ್ಯರ್ಥಿ ಜ್ಯೋತಿ ಗಣೇಶ್ ಹಾಗೂ ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಗೌಡ ಜಂಟಿಯಾಗಿ ರೋಡ್​ ಶೋ ನಡೆಸಿ ನಾಮಪತ್ರ ಸಲ್ಲಿಸಿದರು.

tumakuru-bjp-candidates-submitted-their-nomination-with-road-show
ತುಮಕೂರು: ಜಂಟಿ ರೋಡ್ ಶೋ ನಡೆಸಿ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿಗಳು

By

Published : Apr 18, 2023, 5:02 PM IST

ತುಮಕೂರು:ತುಮಕೂರು ನಗರ ವಿಧಾನಸಭಾ ಕ್ಷೇತ್ರ ಹಾಗೂ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳು ಇಂದು ಕಾರ್ಯಕರ್ತರು ಮತ್ತು ಬೆಂಬಲಿಗರೊಂದಿಗೆ ಜಂಟಿಯಾಗಿ ತೆರಳಿ ನಾಮಪತ್ರ ಸಲ್ಲಿಸಿದರು. ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜ್ಯೋತಿ ಗಣೇಶ್ ಹಾಗೂ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಗೌಡ ಇಬ್ಬರೂ ಏಕಕಾಲದಲ್ಲಿ ನಗರದ ಗಣಪತಿ ದೇಗುಲದಲ್ಲಿ ಪೂಜಿ ಸಲ್ಲಿಸಿ, ನಂತರ ಕಾರ್ಯಕರ್ತರು ಹಾಗೂ ತಮ್ಮ ಬೆಂಬಲಿಗರೊಂದಿಗೆ ನಗರದಲ್ಲಿ ರೋಡ್ ಶೋ ನಡೆಸಿ ನಾಮಪತ್ರ ಸಲ್ಲಿಸಿದರು. ರಾಜ್ಯಸಭಾ ಸದಸ್ಯರಾಗಿರುವ ಚಿತ್ರನಟ ಜಗ್ಗೇಶ್ ಪಾಲ್ಗೊಂಡಿದ್ದರು.

ತುಮಕೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ತುಮಕೂರು ಪಾಲಿಕೆ ಆವರಣದಲ್ಲಿರುವ ಚುನಾವಣಾ ಅಧಿಕಾರಿ ಕಚೇರಿಗೆ ಬಿಜೆಪಿ ಅಭ್ಯರ್ಥಿ ಜ್ಯೋತಿ ಗಣೇಶ್ ತೆರಳಿ ನಾಮಪತ್ರ ಸಲ್ಲಿಸಿದರೆ, ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿಗೆ ಸುರೇಶ್ ಗೌಡ ನಾಮಪತ್ರ ಸಲ್ಲಿಕೆ ಮಾಡಿದರು. ಇದೇ ವೇಳೆ ಶಾಸಕ ಜ್ಯೋತಿ ಗಣೇಶ್ ಕೂಡ ಹಾಜರಿದ್ದರು.

ಡಿ.ಕೆ.ಶಿವಕುಮಾರ್ ಹೆಲಿಕಾಪ್ಟರ್ ತಪಾಸಣೆ: ತಿಪಟೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಷಡಕ್ಷರಿ ಅವರ ನಾಮಪತ್ರ ಸಲ್ಲಿಸಲು ಆಯೋಜಿಸಲಾಗಿದ್ದ ರೋಡ್​​ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲು ಹೆಲಿಕಾಪ್ಟರ್​​ನಲ್ಲಿ ಆಗಮಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರ ಹೆಲಿಕಾಪ್ಟರ್​ ಅನ್ನು ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಸುದೀರ್ಘವಾಗಿ ತಪಾಸಣೆ ನಡೆಸಿದರು.

ಇದನ್ನೂ ಓದಿ:ಶೆಟ್ಟರ್ ನನ್ನ ಗುರುಗಳು, ನನಗೆ ನಿಷ್ಟಾವಂತ ಕಾರ್ಯಕರ್ತ ಎಂಬ ಕಾರಣಕ್ಕೆ ಟಿಕೆಟ್​ ಸಿಕ್ಕಿದೆ: ಮಹೇಶ್​ ಟೆಂಗಿನಕಾಯಿ

ನಿವೃತ್ತ IAS ಅಧಿಕಾರಿ ಅನಿಲ್ ಕುಮಾರ್ ನಾಮಪತ್ರ ಸಲ್ಲಿಕೆ: ತುಮಕೂರಿನ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಕುಮಾರ್ ಅವರು ನಿನ್ನೆ (ಸೋಮವಾರ) ನಾಮಪತ್ರ ಸಲ್ಲಿಸಿದರು. ಸಾವಿರಾರು ಬಿಜೆಪಿ ಕಾರ್ಯಕರ್ತರೊಂದಿಗೆ ಭರ್ಜರಿ ರೋಡ್ ಶೋ ನಡೆಸಿ, ಕೊರಟಗೆರೆ ಸರ್ಕಾರಿ ಬಸ್ ನಿಲ್ದಾಣ ವೃತ್ತದಿಂದ ತಾಲೂಕು ಕಚೇರಿಗೆ ಬಂದು ಕ್ಷೇತ್ರದ ಚುನಾವಣಾಧಿಕಾರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

ಇದನ್ನೂ ಓದಿ:ನಟ ಸುದೀಪ್ ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಳ್ಳಬೇಡಿ: ನಾಯಕ ಸಮಾಜದ ಮುಖಂಡರ ಆಕ್ಷೇಪ

ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಜೆಡಿಎಸ್‌ನಿಂದ ಮಾಜಿ ಶಾಸಕ ಸುಧಾಕರ್ ಲಾಲ್ ಚುನಾವಣಾ ಕಣದಲ್ಲಿದ್ದಾರೆ. ಕಳೆದ ನಾಲ್ಕೈದು ತಿಂಗಳಿನಿಂದ ಕ್ಷೇತ್ರದಾದ್ಯಂತ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ಅನಿಲ್ ಕುಮಾರ್ ಅವರಿಗೆ ಬಿಜೆಪಿ ಹೈಕಮಾಂಡ್‌ನಿಂದ ಈ ಬಾರಿ ಚುನಾವಣೆಗೆ ಟಿಕೆಟ್​​ ನೀಡಿದೆ.

ಇದನ್ನೂ ಓದಿ:ಎತ್ತಿನಗಾಡಿಯಲ್ಲಿ ಬಂದು ನಾಮಪತ್ರ ಸಲ್ಲಿಕೆ ಮಾಡಿದ ಯಲಹಂಕ ಜೆಡಿಎಸ್ ಅಭ್ಯರ್ಥಿ ಮುನೇಗೌಡ -VEDIO

ABOUT THE AUTHOR

...view details