ತುಮಕೂರು:ಜಿಲ್ಲೆಯಲ್ಲಿ 165 ಮಂದಿಗೆ ಸೋಂಕು ತಗಲಿದ್ದು, ಸೋಂಕಿತರ ಸಂಖ್ಯೆ 4,408ಕ್ಕೆ ಏರಿಕೆ ಆಗಿದೆ. ಸೋಂಕಿನಿಂದ ಐವರು ಮೃತಪಟ್ಟಿದ್ದಾರೆ.
ತುಮಕೂರು ಜಿಲ್ಲೆಯಲ್ಲಿ ಕೊರೊನಾಗೆ ಐವರು ಬಲಿ - Covid-19 Report
ತುಮಕೂರು ಜಿಲ್ಲೆಯಲ್ಲಿ ಇಂದು ಐವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 139ಕ್ಕೆ ಏರಿಕೆಯಾಗಿದೆ.
ತುಮಕೂರು ತಾಲೂಕಿನಲ್ಲಿ 40, ತಿಪಟೂರು 26 , ತುರುವೇಕೆರೆ ಮತ್ತು ಕುಣಿಗಲ್ ತಾಲೂಕಿನಲ್ಲಿ ತಲಾ 19, ಪಾವಗಡದ 15 ಮಂದಿಗೆ, ಚಿಕ್ಕನಾಯಕನಹಳ್ಳಿ ಮತ್ತು ಶಿರಾ ತಾಲೂಕಿನಲ್ಲಿ ತಲಾ 11, ಗುಬ್ಬಿ ಹಾಗೂ ಮಧುಗಿರಿ ತಾಲೂಕಿನ ತಲಾ 10 ಮಂದಿಗೆ, ಕೊರಟಗೆರೆ ತಾಲೂಕಿನಲ್ಲಿ ನಾಲ್ವರಿಗೆ ಸೋಂಕು ತಗುಲಿದೆ.
165 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ 3,254 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 1,015 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಐವರು ಸೋಂಕಿನಿಂದ ಮೃತಪಟ್ಟಿದ್ದು, ಮೃತರ ಸಂಖ್ಯೆ 139ಕ್ಕೆ ಏರಿಕೆಯಾಗಿದೆ. 60 ವರ್ಷ ಮೇಲ್ಪಟ್ಟ 31 ಮಂದಿಯಲ್ಲಿ ಸೋಂಕು ಕಂಡು ಬಂದಿದ್ದು ಗಮನಾರ್ಹ ಅಂಶವಾಗಿದೆ. ಇದರಲ್ಲಿ 15 ಮಂದಿ ಪುರುಷರು, 16 ಮಂದಿ ಮಹಿಳೆಯರಿದ್ದಾರೆ.