ಕರ್ನಾಟಕ

karnataka

ETV Bharat / state

ತುಮಕೂರು ಜಿಲ್ಲೆಯಲ್ಲಿ ಮುಂದುವರೆದ ಕೊರೊನಾ ನಾಗಾಲೋಟ - ಕೊರೊನಾ ಸುದ್ದಿ

ತುಮಕೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ 21 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೇ ರೀತಿ 66 ಮಂದಿ ಜಿಲ್ಲೆಯ ವಿವಿಧ ಖಾಸಗಿ ಆಸ್ಪತ್ರೆಗಳ ಐಸಿಯುಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Corona
Corona

By

Published : Apr 24, 2021, 9:23 PM IST

ತುಮಕೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯ ನಾಗಾಲೋಟ ಮುಂದುವರೆದಿದ್ದು, ಇಂದು ಒಂದೇ ದಿನ 1,441 ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೂಲಕ ಪ್ರಸ್ತುತ ಜಿಲ್ಲೆಯಲ್ಲಿ 8,598 ಮಂದಿ ಸೋಂಕಿತರು ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು 361 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಹೊರ ಬಂದಿದ್ದಾರೆ. ತುಮಕೂರು ನಗರದಲ್ಲಿಯೇ ಅತಿ ಹೆಚ್ಚು 689 ಮಂದಿ ಸೋಂಕಿತರು ಇಂದು ಪತ್ತೆಯಾಗಿದ್ದಾರೆ. ಶಿರಾ ತಾಲೂಕಿನಲ್ಲಿ 143 ಮಂದಿ, ಪಾವಗಡದಲ್ಲಿ 119, ಚಿಕ್ಕನಾಯಕನಹಳ್ಳಿ 100, ತಿಪಟೂರು 73, ಗುಬ್ಬಿ 70, ತುರುವೇಕೆರೆ 94, ಕೊರಟಗೆರೆ 61, ಮಧುಗಿರಿ 56, ಕುಣಿಗಲ್​​ನಲ್ಲಿ 36 ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ.

ತುಮಕೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ 21 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೇ ರೀತಿ 66 ಮಂದಿ ಜಿಲ್ಲೆಯ ವಿವಿಧ ಖಾಸಗಿ ಆಸ್ಪತ್ರೆಗಳ ಐಸಿಯುಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 87 ಮಂದಿ ಐಸಿಯುಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಇಬ್ಬರು ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ABOUT THE AUTHOR

...view details