ಕರ್ನಾಟಕ

karnataka

By

Published : May 30, 2021, 11:03 AM IST

ETV Bharat / state

ತುಮಕೂರು: ಕೋವಿಡ್​ ಕಂಟ್ರೋಲ್​ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಡಿಸಿ ಸೂಚನೆ

ಸೋಂಕು ದೃಢಪಟ್ಟ ಪ್ರತಿ ಸೋಂಕಿತರಿಗೂ ಕೋವಿಡ್ ಕಿಟ್ ತಲುಪಿಸಬೇಕು. ಈ ಜವಾಬ್ದಾರಿಯನ್ನು ತಹಶೀಲ್ದಾರ್ ಮತ್ತು ಟಿಹೆಚ್ಒಗಳು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್​​.ಪಾಟೀಲ್​​ ಸೂಚಿಸಿದರು.

Tumakuru DC Meeting
ತುಮಕೂರಿನಲ್ಲಿ ಕೋವಿಡ್​ ನಿಯಂತ್ರಣಕ್ಕೆ ಸಭೆ

ತುಮಕೂರು: ಜಿಲ್ಲೆಯಲ್ಲಿ ಅತಿ ಹೆಚ್ಚು ಪ್ರಕರಣಗಳು ಕಂಡು ಬಂದ ಹಳ್ಳಿಗಳಿಗೆ ಭೇಟಿ ನೀಡಿ ಸೋಂಕಿತರಿಗೆ ಕೋವಿಡ್ ಕಿಟ್ ತಲುಪಿರುವ ಬಗ್ಗೆ ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಇಂದು ತಹಶೀಲ್ದಾರ್​ಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಿರ್ದೇಶಿಸಿದರು. ಕೋವಿಡ್ ನಿರ್ವಹಣೆಯ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ಮೂಲಕ ಪಾಸಿಟಿವಿಟಿ ಪ್ರಮಾಣವನ್ನು ಇಳಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪ್ರತಿಯೊಬ್ಬ ಅಧಿಕಾರಿಯೂ ಆಸಕ್ತಿ ವಹಿಸಿ ಕಾರ್ಯನಿರ್ವಹಿಸಿದರೆ ನಿರೀಕ್ಷೆಗೂ ಮೀರಿ ಸೋಂಕನ್ನು ನಿಯಂತ್ರಣಕ್ಕೆ ತರಬಹುದು ಎಂದು ನಿರ್ದೇಶಿಸಿದರು.

ತಾಲೂಕುವಾರು ಎಷ್ಟು ರೆಡ್ ಝೋನ್ ಹಾಗೂ ಕೊರೊನಾ ಹಾಟ್ ಸ್ಪಾಟ್ ಪ್ರದೇಶಗಳಿವೆ ಎಂಬುದನ್ನು ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ, ರೆಡ್ ಝೋನ್ ಮತ್ತು ಹಾಟ್ ಸ್ಪಾಟ್ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ ನೀಡಿ ಅಂತಹ ಗ್ರಾಮಗಳಲ್ಲಿ ಸೋಂಕಿತರ ಪ್ರಮಾಣ ಹೆಚ್ಚಾಗದಂತೆ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದರು.

ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸಬೇಕು. ಗ್ರಾಮ ಪಂಚಾಯತ್​​ ಕಾರ್ಯಪಡೆಯನ್ನು ಬಲಪಡಿಸಿ ನಿಯಂತ್ರಣಕ್ಕೆ ಕ್ರಮ ವಹಿಸಬೇಕು. ಪ್ರತಿದಿನ ಸೋಂಕಿನ ಸಂಖ್ಯೆ ಹೆಚ್ಚಾಗಿ ಕಂಡುಬರುವ ಪ್ರದೇಶದಲ್ಲಿ ಎಲ್ಲರನ್ನು ಕೋವಿಡ್ ಪರೀಕ್ಷೆಗೊಳಪಡಿಸಬೇಕು ಎಂದು ಸೂಚಿಸಿದರು.

ಇದನ್ನೂ ಓದಿ:ಸಾಮಾಜಿಕ ಜಾಲತಾಣಗಳಲ್ಲಿ ದಿಢೀರ್ ಇನ್‌ಆಕ್ಟಿವ್ ಆದ ಸಚಿವ ಸುರೇಶ್ ಕುಮಾರ್, ಚಾಮರಾಜನಗರ ಡಿಸಿ

ಕೋವಿಡ್ ಆರೈಕೆ ಕೇಂದ್ರದಲ್ಲಿ ಗುಣಮಟ್ಟದ ಆಹಾರದ ವಿತರಣೆ, ಸ್ವಚ್ಛತೆ ಬಗ್ಗೆ ದೂರುಗಳು ಬರದಂತೆ ಕ್ರಮ ಕೈಗೊಳ್ಳಬೇಕು. ನಿರ್ಲಕ್ಷ್ಯ ಮಾಡದೆ ಕೋವಿಡ್ ಕೇರ್ ಸೆಂಟರ್​ಗಳನ್ನು ನಿರ್ವಹಣೆ ಮಾಡಬೇಕು ಎಂದು ನಿರ್ದೇಶಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಮಾತನಾಡಿ, ಹೋಂ ಐಸೋಲೇಷನ್​ನಲ್ಲಿರುವ ಸೋಂಕಿತರು ನನಗೆ ರೋಗ ಲಕ್ಷಣಗಳಿಲ್ಲವೆಂದು ಹೊರಗಡೆ ತಿರುಗಾಡುತ್ತಾರೆ. ಇದಕ್ಕೆ ಕಡಿವಾಣ ಹಾಕುವುದರಿಂದ ಸೋಂಕನ್ನು ಕಟ್ಟಿಹಾಕಬಹುದು. ಇದಲ್ಲದೆ, ಪರೀಕ್ಷೆಗಳನ್ನು ಹೆಚ್ಚಾಗಿ ಮಾಡಬೇಕು ಎಂದು ಸೂಚಿಸಿದರು. ಐಸಿಯು ಸೋಂಕಿತರನ್ನು ಎಸ್​​ಒಪಿ ನಿಯಮಗಳ ಪ್ರಕಾರವೇ ನಿರ್ವಹಿಸಬೇಕು ಎಂದು ತಿಳಿಸಿದರು.

ABOUT THE AUTHOR

...view details