ಕರ್ನಾಟಕ

karnataka

By

Published : Feb 14, 2021, 11:08 AM IST

ETV Bharat / state

ತುಮಕೂರು ಪಾಲಿಕೆ ಅಧಿಕಾರ ಹಿಡಿಯಲು ಬಿಜೆಪಿ ರಣತಂತ್ರ?

ಈ ಬಾರಿ ತುಮಕೂರು ಮಹಾನಗರ ಪಾಲಿಕೆಯ ಅಧಿಕಾರದ ಚುಕ್ಕಾಣಿಯನ್ನು ಹಿಡಿಯಲು ಬಿಜೆಪಿ ಭಾರಿ ಕಸರತ್ತು ನಡೆಸಿದೆ. ಈ ಹಿಂದೆ ಪಾಲಿಕೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಇಲ್ಲದ ಕಾರಣ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಹೊಂದಾಣಿಕೆಯಿಂದ ಅಧಿಕಾರ ಹಿಡಿದಿದ್ದವು.

tumkur city corporations election news
ತುಮಕೂರು ಮಹಾನಗರ ಪಾಲಿಕೆ

ತುಮಕೂರು: ಮಹಾನಗರ ಪಾಲಿಕೆಯಲ್ಲಿ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಬಿಜೆಪಿ ಮೂರನೇ ಅವಧಿಯಲ್ಲಿಯಾದರೂ ತುಮಕೂರು ಮಹಾನಗರ ಪಾಲಿಕೆ ಅಧಿಕಾರ ಹಿಡಿಯಲು ವ್ಯವಸ್ಥಿತ ಪ್ರಯತ್ನ ನಡೆಸುತ್ತಿದೆ.

ತುಮಕೂರು ಮಹಾನಗರ ಪಾಲಿಕೆ

ಹೌದು, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಈಗಾಗಲೇ ಎರಡು ಬಾರಿ ಅಧಿಕಾರ ಹಿಡಿದಿದ್ದವು. ಆದರೆ ಈ ಬಾರಿ ಶತಾಯಗತಾಯ ಪಾಲಿಕೆ ಅಧಿಕಾರವನ್ನು ತಮ್ಮದಾಗಿಸಿಕೊಳ್ಳಲು ಬಿಜೆಪಿ ರಣತಂತ್ರ ರೂಪಿಸಿದೆ. ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಎಂಬ ಅಸ್ತ್ರವನ್ನು ಬಳಸಿಕೊಂಡು ಮೇಯರ್ ಸ್ಥಾನವನ್ನು ಉಳಿಸಿಕೊಳ್ಳಲು ಮುಂದಾಗಿದೆ. ಮುಖ್ಯವಾಗಿ ಜೆಡಿಎಸ್ ಮತ್ತು ಕಾಂಗ್ರೆಸ್ ನಲ್ಲಿ ಪರಿಶಿಷ್ಟ ಪಂಗಡದ ಯಾವ ಸದಸ್ಯರು ಇಲ್ಲ ಹೀಗಾಗಿ ಇದನ್ನು ಗಮನಿಸಿರುವ ಬಿಜೆಪಿ, ರಾಜ್ಯದಲ್ಲಿ ತಮ್ಮದೇ ಸರ್ಕಾರ ಇರುವುದರಿಂದ ಮೇಯರ್ ಸ್ಥಾನವನ್ನು ಪರಿಶಿಷ್ಟ ಪಂಗಡದ ಮತ್ತು ಉಪಮೇಯರ್ ಸ್ಥಾನವನ್ನು ಸಾಮಾನ್ಯ ಮಹಿಳೆಗೆ ಮೀಸಲಾತಿ ತರುವ ವ್ಯವಸ್ಥಿತ ಪ್ರಯತ್ನದಲ್ಲಿ ತೊಡಗಿದೆ. ಪರಿಶಿಷ್ಟ ವರ್ಗದ ಮೀಸಲಾತಿಯಲ್ಲಿ ಗೆಲುವು ಸಾಧಿಸಿರುವ ಬಿಜೆಪಿಯ 32ನೇ ವಾರ್ಡಿನ ಸದಸ್ಯ ಬಿ ಜಿ ಕೃಷ್ಣಪ್ಪ ಒಬ್ಬರೇ ಆಯ್ಕೆಯಾಗಿದ್ದಾರೆ. ಹೀಗಾಗಿ ತುಮಕೂರು ಪಾಲಿಕೆಯಲ್ಲಿ ಬಹುಮತ ಇಲ್ಲದಿದ್ದರೂ ಅಧಿಕಾರವನ್ನು ತನ್ನದಾಗಿಸಿಕೊಳ್ಳಲು ಬಿಜೆಪಿ ಮುಂದಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿರುವ ಮೀಸಲಾತಿ ಪತ್ರ
ಮೈಸೂರು ಮಹಾನಗರ ಪಾಲಿಕೆಯ 35 ಸದಸ್ಯ ಸ್ಥಾನದಲ್ಲಿ 12 ಮಂದಿ ಬಿಜೆಪಿ, ತಲಾ ಹತ್ತು ಮಂದಿ ಜೆಡಿಎಸ್ ಮತ್ತು ಕಾಂಗ್ರೆಸ್ ಸದಸ್ಯರು, ಮೂವರು ಪಕ್ಷೇತರರು ಇದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರ ನಡೆಸುತ್ತಿದ್ದರು ಮಹಾನಗರಪಾಲಿಕೆಯಲ್ಲಿ ತಮ್ಮದೇ ಆಡಳಿತ ಹೊಂದಲು ಮೀಸಲಾತಿ ಅಸ್ತ್ರವನ್ನು ಬಳಕೆ ಮಾಡಿಕೊಳ್ಳುತ್ತಿದೆ ಜೆಡಿಎಸ್ ಮತ್ತು ಕಾಂಗ್ರೆಸ್ ನಲ್ಲಿ ಪರಿಶಿಷ್ಟ ಪಂಗಡದ ಸದಸ್ಯರು ಇಲ್ಲ ಇಲ್ಲ ಎಂಬುದನ್ನು ಗಮನಿಸಿ ಮೀಸಲಾತಿ ನಿಗದಿಪಡಿಸಲಾಗಿದೆ ಎಂದು ಪಾಲಿಕೆಯ ಮೇಯರ್ ಫರೀದಾ ಬೇಗಮ್ ಅಭಿಪ್ರಾಯಪಟ್ಟಿದ್ದಾರೆ.ತಾವು ಮೇಯರ್ ಆಗಿದ್ದ ಅವಧಿಯಲ್ಲಿ ಕೊರೊನಾ ಸೋಂಕಿನ ಹಿನ್ನೆಲೆ ನಿರೀಕ್ಷಿತ ಪ್ರಮಾಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ಅನುಷ್ಠಾನಕ್ಕೆ ತರಲು ಸಾಧ್ಯವಾಗಲಿಲ್ಲ. ಇನ್ನಷ್ಟು ದಿನಗಳ ಕಾಲ ಅಧಿಕಾರಾವಧಿಯನ್ನು ಮುಂದುವರಿಸಬೇಕೆಂದು ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಅದಕ್ಕೂ ಕೂಡ ಸರ್ಕಾರ ಸ್ಪಂದಿಸಿಲ್ಲ ಎಂದು ತಿಳಿಸಿದ್ದಾರೆ.
ಈ ಕುರಿತಂತೆ ಈಟಿವಿ ಭಾರತ ಜೊತೆ ಮಾತನಾಡಿದ ಬಿಜೆಪಿ ನಗರ ಶಾಸಕ ಜ್ಯೋತಿ ಗಣೇಶ್, ಈಗಾಗಲೇ ಸರ್ಕಾರದ ಮೇಯರ್ ಮೀಸಲಾತಿ ಆದೇಶ ಪತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಸೋಮವಾರ ಅಧಿಕೃತ ಆದೇಶ ಪತ್ರ ಮತ್ತೊಮ್ಮೆ ಕೈಸೇರಲಿದೆ. ಸರ್ಕಾರದ ಆದೇಶದಂತೆ ಪರಿಶಿಷ್ಟ ಪಂಗಡಕ್ಕೆ ಮೇಯರ್ ಸ್ಥಾನದ ಮೀಸಲಾತಿ ನಿಗದಿಯಾಗಿದ್ದರೆ, ಬಿಜೆಪಿ ಸದಸ್ಯರಿಗೆ ಅನಾಯಾಸವಾಗಿ ಅದು ದಕ್ಕಲಿದೆ ಎಂದು ತಿಳಿಸಿದ್ದಾರೆ.
ಈ ಹಿಂದೆ ಪಾಲಿಕೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಇಲ್ಲದ ಕಾರಣ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಹೊಂದಾಣಿಕೆಯಿಂದ ಅಧಿಕಾರ ಹಿಡಿದಿದ್ದವು. ಹೊಂದಾಣಿಕೆಯಂತೆ ಕಳೆದ ಬಾರಿಯ ಸ್ಥಾನವನ್ನು ಕಾಂಗ್ರೆಸ್​ಗೆ ಬಿಟ್ಟು ಕೊಡಲಾಗಿತ್ತು. ಜೆಡಿಎಸ್​ಗೆ ಉಪ ಮೇಯರ್ ಸ್ಥಾನವನ್ನು ನೀಡಲಾಗಿತ್ತು. ಈ ಬಾರಿ ಮೇಯರ್ ಸ್ಥಾನವನ್ನು ಜೆಡಿಎಸ್​​ಗೆ ಹಾಗೂ ಉಪಮೇಯರ್ ಸ್ಥಾನವನ್ನು ಕಾಂಗ್ರೆಸ್​ಗೆ ಬಿಟ್ಟುಕೊಡಲು ಒಳ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಈ ಬಾರಿ ಮೇಯರ್ ಸ್ಥಾನವನ್ನು ಪರಿಶಿಷ್ಟ ಪಂಗಡಕ್ಕೆ ಮೀಸಲಿರಿಸಿರುವುದು ಸ್ಪಷ್ಟವಾದರೆ ಜೆಡಿಎಸ್, ಕಾಂಗ್ರೆಸ್ ಪಕ್ಷದ ಮುಖಂಡರ ನಡೆ ಭಾರಿ ಕುತೂಹಲಕ್ಕೆ ಕಾರಣವಾಗಲಿದೆ.

ABOUT THE AUTHOR

...view details