ಕರ್ನಾಟಕ

karnataka

ETV Bharat / state

ತುಮಕೂರು; ಸ್ಮಾರ್ಟ್ ಸಿಟಿ ಕಾಮಗಾರಿಗೆ ಅಡ್ಡಿಯಾಗಿದ್ದ ಕಟ್ಟಡಗಳ ತೆರವು - tumkur

ತುಮಕೂರಿನ ಬೆಳಗುಂಬ ರಸ್ತೆಯಲ್ಲಿ ಸ್ಮಾರ್ಟ್​ ಸಿಟಿ ಯೋಜನೆಗೆ ಅಡ್ಡಿಯಾಗಿದ್ದ ಕೆಲವು ಕಟ್ಟಡಗಳನ್ನು ತೆರವುಗೊಳಿಸಲಾಗಿದೆ.

ಸ್ಮಾರ್ಟ್ ಸಿಟಿ ರಸ್ತೆ ಕಾಮಗಾರಿಗೆ ಅಡ್ಡಿಯಾಗಿದ್ದ ಕಟ್ಟಡಗಳ ತೆರವು
ಸ್ಮಾರ್ಟ್ ಸಿಟಿ ರಸ್ತೆ ಕಾಮಗಾರಿಗೆ ಅಡ್ಡಿಯಾಗಿದ್ದ ಕಟ್ಟಡಗಳ ತೆರವು

By

Published : Mar 27, 2021, 12:39 PM IST

ತುಮಕೂರು :ಸ್ಮಾರ್ಟ್ ಸಿಟಿ ಯೋಜನೆಯಡಿ ತುಮಕೂರು ನಗರದಲ್ಲಿ ಈಗಾಗಲೇ ವಿವಿಧ ಕಾಮಗಾರಿಗಳು ಭರದಿಂದ ಸಾಗಿವೆ. ಸ್ಮಾರ್ಟ್ ರಸ್ತೆ ಕಾಮಗಾರಿಗಾಗಿ ಬೆಳಗುಂಬ ರಸ್ತೆಯಲ್ಲಿ ಒತ್ತುವರಿ ಮಾಡಿ ನಿರ್ಮಿಸಲಾಗಿದ್ದ ಕಟ್ಟಡಗಳನ್ನು ತುಮಕೂರು ಮಹಾನಗರ ಪಾಲಿಕೆ ನೇತೃತ್ವದಲ್ಲಿ ತೆರವುಗೊಳಿಸಲಾಯಿತು.

ಸ್ಮಾರ್ಟ್ ಸಿಟಿ ರಸ್ತೆ ಕಾಮಗಾರಿಗೆ ಅಡ್ಡಿಯಾಗಿದ್ದ ಕಟ್ಟಡಗಳ ತೆರವು

ಈ ವೇಳೆ ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾದೇವಿ ಹಾಗೂ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಸ್ವಾಮಿ ಸ್ಥಳದಲ್ಲಿದ್ದರು. ಬೆಳಗುಂಬ ರಸ್ತೆಯನ್ನು 75 ಅಡಿ ಅಗಲ ಸ್ಮಾರ್ಟ್ ಸಿಟಿ ರಸ್ತೆಯನ್ನಾಗಿ ನಿರ್ಮಿಸಲು ಪೂರಕವಾಗಿದ್ದ ಸ್ಥಳವನ್ನು ಗುರುತಿಸಲಾಯಿತು.

ಸುಮಾರು 6 ತಿಂಗಳ ಮುಂಚೆಯೇ ಸಂಬಂಧಪಟ್ಟ ಮನೆ ಹಾಗೂ ಅಂಗಡಿ ಮಾಲೀಕರಿಗೆ ಒತ್ತುವರಿಯಾಗಿರುವ ಜಾಗದಲ್ಲಿ ನಿರ್ಮಿಸಲಾಗಿರುವ ಕಟ್ಟಡಗಳನ್ನು ತೆರವುಗೊಳಿಸುವಂತೆ ನೋಟಿಸ್​​ ನೀಡಲಾಗಿತ್ತು. ಕೆಲವರು ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿದ್ದು, ನ್ಯಾಯಾಲಯದಲ್ಲಿ ಇತ್ಯರ್ಥವಾಗುವವರೆಗೂ ಯಾವುದೇ ರೀತಿಯ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ.

ABOUT THE AUTHOR

...view details