ಕರ್ನಾಟಕ

karnataka

ETV Bharat / state

ಪಾಲಿಕೆ ವ್ಯಾಪ್ತಿಯ ಉದ್ದಿಮೆ ಪರವಾನಿಗೆ ದರ ಶೇ.5ರಷ್ಟು ಹೆಚ್ಚಳ - corporation tax increased

ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮಳಿಗೆಗಳ ದರವನ್ನು ಶೇ.5ರಷ್ಟು ಹೆಚ್ಚಳ ಮಾಡಲಾಗಿದ್ದು, ಎಲ್ಲ ಸದಸ್ಯರು ಸರ್ವಾನುಮತದಿಂದ ಒಪ್ಪಿಕೊಂಡಿದ್ದಾರೆ.

tumkur corporation meeting
ಮಹಾನಗರ ಪಾಲಿಕೆ ಸಭೆ

By

Published : Aug 25, 2020, 9:10 PM IST

ತುಮಕೂರು: ಕೊರೊನಾ ಬಿಕ್ಕಟ್ಟಿನ ನಡುವೆ ಮಹಾನಗರ ಪಾಲಿಕೆ ವ್ಯಾಪ್ತಿಯ ಉದ್ದಿಮೆದಾರರಿಗೆ ಪರವಾನಗಿ ದರವನ್ನು ಶೇ.5ರಷ್ಟು ಹೆಚ್ಚಳ ಮಾಡಲಾಗಿದ್ದು, ಪಾಲಿಕೆ ಸದಸ್ಯರೆಲ್ಲರೂ ಸರ್ವಾನುಮತದ ನಿರ್ಣಯ ತೆಗೆದುಕೊಂಡಿದ್ದಾರೆ.

ಮಹಾನಗರ ಪಾಲಿಕೆ ಸಭೆ

ಇಲ್ಲಿನ ಪಾಲಿಕೆ ಸಭಾಂಗಣದಲ್ಲಿ ಮೇಯರ್ ಫರೀದಾ ಬೇಗಂ ಅಧ್ಯಕ್ಷತೆಯಲ್ಲಿ ನಡೆದ, ಪಾಲಿಕೆ ವಿಶೇಷ ಸಾಮಾನ್ಯ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಯಿತು. ಪಾಲಿಕೆ ವ್ಯಾಪ್ತಿಯಲ್ಲಿ ಹಿಂದುಳಿದ ವರ್ಗಕ್ಕೆ ಸೇರಿದ ಮಡಿವಾಳ ಸಮಾಜ ಹಾಗೂ ಸವಿತಾ ಸಮಾಜ ಕಸುಬುಗಳಾದ ಕಟಿಂಗ್ ಶಾಪ್(ಹೇರ್ ಡ್ರೆಸೆಸ್) ಹಾಗೂ ಐರನ್ ಅಂಗಡಿಗಳಿಗೆ(ಲಾಂಡ್ರಿ ಡ್ರೈಕ್ಲಿಂಗ್ ಶಾಫ್) ಪಾಲಿಕೆ ನೀಡುವ ಪರವಾನಗಿ ದರವನ್ನು ಶೇ.50ರ ರಿಯಾಯಿತಿ ದರದಲ್ಲಿ ಅನ್ವಯವಾಗುವಂತೆ ಉದ್ದಿಮೆ ರಹದಾರಿಯನ್ನು ನೀಡಲು ಸಭೆ ತೀರ್ಮಾನಿಸಿತು.

ಇನ್ನೂ ಕಡಿಮೆ ಆದಾಯ ಹೊಂದಿರುವ ಇತರೆ ಸಮುದಾಯದವರಿಗೂ ಕೂಡ ಅನ್ವಯವಾಗುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸುವಂತೆ ಆಯುಕ್ತರಿಗೆ ಸದಸ್ಯರೆಲ್ಲರೂ ಒತ್ತಾಯಿಸಿದರು. ಶಿಥಿಲಾವಸ್ಥೆ ತಲುಪಿರುವ ವಿದ್ಯುತ್ ಕಂಬಗಳನ್ನು ತಕ್ಷಣ ತೆರವುಗೊಳಿಸಿ ಹೊಸ ಕಂಬಗಳನ್ನು ಅಳವಡಿಸಬೇಕು ಎಂದು ಸೂಚಿಸಲಾಯಿತು.

ವಿದ್ಯುತ್​ ಅಪಾಯಗಳು ಎದುರಾಗುವ ಸಾಧ್ಯತೆ ಇದ್ದರೂ ಬೆಸ್ಕಾಂ ಗಮನಹರಿಸುತ್ತಿಲ್ಲ. ವಿದ್ಯುತ್ ಅವಘಡಗಳಿಂದ ಸಾರ್ವಜನಿಕರಿಗೆ ಯಾವುದೇ ಸಮಸ್ಯೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಬೆಸ್ಕಾಂ ಅಧಿಕಾರಿಗಳಿಗೆ ಸದಸ್ಯರು ಸೂಚಿಸಿದರು.

ಪಾಲಿಕೆ ಸದಸ್ಯ ಕುಮಾರ್ ಮಾತನಾಡಿ, ಸ್ಮಾರ್ಟ್​ ಸಿಟಿ, ಬೆಸ್ಕಾಂ ಹಾಗೂ ವಿವಿಧ ಇಲಾಖೆಗಳ ಯೋಜನೆಯಡಿ ನಗರದಲ್ಲಿ ಈಗಾಗಲೇ ಕೈಗೊಂಡಿರುವ ಕಾಮಗಾರಿಗಳಾದ ಗ್ಯಾಸ್​ ಲೈನ್, ಪೈಪ್​ ಲೈನ್, ವಿದ್ಯುತ್ ಪರಿವರ್ತಕಗಳ ಅಳವಡಿಕೆಗಾಗಿ ರಸ್ತೆ ಅಗೆದು ದುರಸ್ತಿಗೊಳಿಸಿದ್ದಾರೆ. ಇವರಿಂದ ಪಾಲಿಕೆ ತೆರಿಗೆ ಸಂಗ್ರಹಿಸಬೇಕು ಎಂದು ಆಯುಕ್ತರ ಗಮನಕ್ಕೆ ತರಲಾಯಿತು.

ಅಂಬೇಡ್ಕರ್ ಪುತ್ಥಳಿಗೆ ಮನವಿ: ಪಾಲಿಕೆ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಯನ್ನು ಸ್ಥಾಪಿಸುವಂತೆ ಸದಸ್ಯರು ಸರ್ವಾನುಮತದಿಂದ ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಆಯುಕ್ತರು ಯಾವುದೇ ಪುತ್ಥಳಿಯನ್ನು ಸ್ಥಾಪಿಸುವ ಮುನ್ನ ಸರ್ಕಾರದ ಅನುಮತಿ ಪಡೆಯಬೇಕು. ಅದಕ್ಕಾಗಿ ಕೂಡಲೇ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದು ಸಭೆಗೆ ತಿಳಿಸಿದರು.

ಸಭೆಯಲ್ಲಿ ಪಾಲಿಕೆ ಆಯುಕ್ತೆ ರೇಣುಕಾ , ಉಪಮೇಯರ್ ಶಶಿಕಲಾ ಗಂಗಹನುಮಯ್ಯ, ತೆರಿಗೆ ನಿರ್ಧರಣೆ ಮತ್ತು ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷ ಮಹೇಶ್, ಪಟ್ಟಣ ಯೋಜನೆ ಮತ್ತು ಸುಧಾರಣೆ ಸ್ಥಾಯಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಸದಸ್ಯರು, ಪಾಲಿಕೆ ಅಧಿಕಾರಿಗಳು ಇದ್ದರು.

ABOUT THE AUTHOR

...view details