ತುಮಕೂರು: ಲಾಕ್ಡೌನ್ ಸಡಿಲಿಕೆ ನಂತರ 462 ಮಂದಿ ಹೊರ ರಾಜ್ಯಗಳಿಂದ ಬಂದಿದ್ದಾರೆ ಎಂದು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಹೊರ ರಾಜ್ಯಗಳಿಂದ 462 ಮಂದಿ ಜಿಲ್ಲೆಗೆ ಆಗಮನ: ತುಮಕೂರು ಡಿಸಿ - ತುಮಕೂರಿನಲ್ಲಿ ಕೊರೊನಾ ಪ್ರಕರಣಗಳು
ತುಮಕೂರು ಜಿಲ್ಲೆಗೆ ಲಾಕ್ಡೌನ್ ಸಡಿಲಿಕೆ ಹಿನ್ನೆಲೆ ನೆರೆ ರಾಜ್ಯಗಳ ಸಾಕಷ್ಟು ಮಂದಿ ಬಂದಿದ್ದಾರೆ ಎಂದು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ತುಮಕೂರು ಡಿ.ಸಿ ರಾಕೇಶ್ ಕುಮಾರ್
ಇದರಲ್ಲಿ ಆಂಧ್ರ ಪ್ರದೇಶದಿಂದ ಬಂದವರ ಸಂಖ್ಯೆ ಹೆಚ್ಚಾಗಿದ್ದು, 133 ಮಂದಿ ಜಿಲ್ಲೆಗೆ ಪ್ರವೇಶಿಸಿದ್ದಾರೆ. ಆಂಧ್ರ ಪ್ರದೇಶಕ್ಕೆ ಹೊಂದಿಕೊಂಡಂತೆ ಇರುವ ಮಧುಗಿರಿ, ಪಾವಗಡ ಹಾಗೂ ಕೊರಟಗೆರೆ ತಾಲೂಕಿಗೆ ಬಂದಿದ್ದಾರೆ. ತಮಿಳುನಾಡಿನಿಂದ 103, ಮಹಾರಾಷ್ಟ್ರದಿಂದ 113 ಮಂದಿ ಜಿಲ್ಲೆಗೆ ಆಗಮಿಸಿದ್ದಾರೆ.
ಇವರೆಲ್ಲರ ಗಂಟಲು ದ್ರವ ಪಡೆದು ಪರೀಕ್ಷೆಗೆ ಕಳುಹಿಸಿಕೊಡಲಾಗಿದ್ದು, ವರದಿಯ ನಿರೀಕ್ಷೆಯಲ್ಲಿ ಇದ್ದೇವೆ ಎಂದು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ತಿಳಿಸಿದ್ದಾರೆ.